7:13 AM Friday10 - January 2025
ಬ್ರೇಕಿಂಗ್ ನ್ಯೂಸ್
ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಸಮೀಪ ಭೀಕರ ರಸ್ತೆ ಅಪಘಾತ: ಟ್ಯಾಂಕರ್ ಅಡಿಗೆ ಸಿಲುಕಿ ಬೈಕ್ ಸಹ ಸವಾರೆ ದಾರುಣ ಸಾವು

09/11/2024, 21:57

ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರೆ ಮೃತಪಟ್ಟ ದಾರುಣ ಘಟನೆ ನಡೆದಿದೆ.


ಮೃತಪಟ್ಟ ಮಹಿಳೆಯನ್ನು ಸುರತ್ಕಲ್ ಸಮೀಪದ ಕೃಷ್ಣಾಪುರದ ರಹಮತ್(47) ಎಂದು ಗುರುತಿಸಲಾಗಿದೆ. ಬೈಕ್ ಸವಾರರಾಗಿದ್ದ ಅವರ ಪತಿ ಅಬ್ದುಲ್ ರಶೀದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಸಮರ್ಪಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವೇಳೆ ಟ್ಯಾಂಕರ್‌ವೊಂದರ ಅಡಿಗೆ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ತೊಕ್ಕೊಟ್ಟು – ಚೆಂಬುಗುಡ್ಡೆ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಆಕ್ರೋಶಗೊಂಡು ಸೇರಿದ್ದರಿಂದ, ಟ್ರಾಫಿಕ್ ಜಾಮ್ ಉಂಟಾಯಿತು.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸದ್ಯ ಮಹಿಳೆಯ ಮೃತದೇಹವನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಪೊಲೀಸರ ಪ್ರಕ್ರಿಯೆ ಮುಗಿದ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಿದ್ದೇವೆ ಎಂದು ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
….

“ಮಂಗಳೂರು ನಗರದಿಂದ ದೇರಳಕಟ್ಟೆಗೆ ತೆರಳುವ ತೊಕ್ಕೊಟ್ಟು – ಚೆಂಬುಗುಡ್ಡೆಯ ರಸ್ತೆಯು ಪ್ರಮುಖ ರಸ್ತೆಯಾಗಿದ್ದು, ಪ್ರಮುಖ ಮೂರು ನಾಲ್ಕು ಆಸ್ಪತ್ರೆ, ಕಾಲೇಜು, ವಿವಿಗಳನ್ನು ಸಂಪರ್ಕಿಸುತ್ತದೆ. ಇಲ್ಲಿನ ರಸ್ತೆಯು ಸಂಪೂರ್ಣ ಹಾಳಾಗಿ, ಸುಮಾರು ವರ್ಷಗಳೇ ಕಳೆದಿದೆ. ಆದರೂ ಕೂಡ, ಉಳ್ಳಾಲದ ಶಾಸಕರಾದ ಸ್ಪೀಕರ್ ಯು ಟಿ ಖಾದರ್ ಅಗಲೀ, ಉಳ್ಳಾಲ ನಗರಸಭೆಯ ಅಧಿಕಾರಿಗಳಾಗಲೀ ಈವರೆಗೆ ಕ್ರಮ ಕೈಗೊಂಡಿಲ್ಲ. ಚೊಂಬುಗುಡ್ಡೆ ರಸ್ತೆ ಸರಿಯಾಗಲು ಇನ್ನೆಷ್ಟು ಜನರ ಪ್ರಾಣ ಹೋಗಬೇಕು” ಎಂದು ಸ್ಥಳೀಯಗಳು ಆಕ್ರೋಶ ಹೊರಹಾಕಿದ್ದಾರೆ.

“ಇಂದಿನ ಘಟನೆಗೆ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ. ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು. ಕೂಡಲೇ ಚೊಂಬುಗುಡ್ಡೆ ರಸ್ತೆಯನ್ನು ಸರಿಪಡಿಸಲು ಶಾಸಕ ಯು ಟಿ ಖಾದರ್ ಮುತುವರ್ಜಿ ವಹಿಸಬೇಕು” ಎಂದು ಸ್ಥಳೀಯ ತರಕಾರಿ ವ್ಯಾಪಾರಿಯೋರ್ವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು