1:22 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ತೊಕ್ಕೊಟ್ಟು: ಭೀಕರ ರಸ್ತೆ ಅಪಘಾತ; ಇಬ್ಬರು ದಾರುಣ ಸಾವು; ಮಕ್ಕಳಿಬ್ಬರಿಗೆ ಗಂಭೀರ ಗಾಯ

06/11/2022, 22:08

ಮಂಗಳೂರು(reporterkarnataka.com):
ತೊಕ್ಕೊಟ್ಟು ಕಲ್ಲಾಪು ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ.

ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು.
ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಗಂಗಾಧರ್ ಮತ್ತು ನೇತ್ರಾವತಿ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ.‌ ಲಾರಿ ಚಾಲಕ ಹನೀಫ್ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು