ಇತ್ತೀಚಿನ ಸುದ್ದಿ
ತೊಕ್ಕೊಟ್ಟು ಸಮೀಪ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: 4 ಮಂದಿ ಬಂಧನ; ನ್ಯಾಯಾಲಯಕ್ಕೆ ಹಾಜರು
08/12/2022, 11:27

ಮಂಗಳೂರು(reporterkarnataka.com): ತೊಕ್ಕೊಟ್ಟು ಸಮೀಪದ ಕೋಟೆಕಾರ್ ಬೀರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಾಡಿಗೆ ಮನೆಯೊಂದರ ಮೇಲೆ ಉಳ್ಳಾಲ ಪೊಲೀಸರು ದಾಳಿ ನಡೆಸಿ 4 ಮಂದಿಯನ್ನು ಬಂಧಿಸಿದ್ದಾರೆ.
ಬಾಡಿಗೆ ಮನೆ ನಿವಾಸಿಗಳಾದ ಮೊಹಮ್ಮದ್ ಇಕ್ಬಾಲ್, ಅವರ ಪತ್ನಿ ಅಲಿಯಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್ ಮತ್ತು ಇರ್ಷಾದ್ ಅಡ್ಯನಡ್ಕ ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.