1:21 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದವರನ್ನು ಬಿಡುವುದಿಲ್ಲ; “ಫಾಸ್ಟ್ ಟ್ರ್ಯಾಕ್ ಕೋರ್ಟ್” ಸ್ಥಾಪನೆ: ಪ್ರಧಾನಿ ಮೋದಿ ಘೋಷಣೆ

23/07/2026, 19:34

ನವದೆಹಲಿ(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸಲು ತ್ವರಿತಗತಿ (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ವಿದ್ಯಾರ್ಥಿಗಳ ಕಲ್ಯಾಣ ಮತ್ತು ಅವರ ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶೀಘ್ರ ಹಾಗೂ ಕಠಿಣ ಶಿಕ್ಷೆ ಖಚಿತಪಡಿಸಲು ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ” ಎಂದು ತಿಳಿಸಿದ್ದಾರೆ.
ಈ ಸಂಬಂಧ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರದ ಕ್ರಮಗಳು ಮುಂದುವರಿಯಲಿದ್ದು, ಯುವಜನರ ಭವಿಷ್ಯಕ್ಕೆ ಧಕ್ಕೆ ತರಲು ಯತ್ನಿಸುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು