ಇತ್ತೀಚಿನ ಸುದ್ದಿ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ
07/09/2025, 19:52

ಮಂಗಳೂರು(reporterkarnataka.com): ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.
ಆ.29ರಂದು ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು, ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಈ ಬಗ್ಗೆ ಡ್ಯೂಟಿ ಟರ್ಮಿನಲ್ ಮ್ಯಾನೇಜರ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಮೊ.ನಂ 156/2025 ಕಲಂ:- 351(2), 351(3) BNS U/s:- 3(1)d Suppression of unlawful acts against safety of civil aviation act 1982 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಬೆದರಿಕೆ ಕರೆ ಮಾಡಿದ ಆಪಾದಿತ ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ Sasikumar (38) S/o:-M D Sampath ಎಂಬಾತನನ್ನು ತಮಿಳುನಾಡು ರಾಜ್ಯ ವೆಲ್ಲೂರ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸಿದಾಗ ಆಪಾದಿತನು ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಮೊಬೈಲ್ ನಂಬ್ರವನ್ನು ಸಾಮಾಜಿಕ ಜಾಲತನದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಅದೇ ತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ ನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನು ದಸ್ತಗಿರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ.