ಇತ್ತೀಚಿನ ಸುದ್ದಿ
ಪೌರಾಯುಕ್ತೆಗೆ ಧಮ್ಕಿ: ಕಾಂಗ್ರೆಸ್ ಉಚ್ಚಾಟಿತ ಮುಖಂಡ ರಾಜೀವ್ ಗೌಡ ಕೊನೆಗೂ ಅರೆಸ್ಟ್
26/01/2026, 19:49
ಚಿಕ್ಕಬಳ್ಳಾಪುರ(reporterkarnataka.com): ಕರ್ತವ್ಯ ನಿರತ ಶಿಡ್ಲಘಟ್ಟ ಪೌರಾಯುಕ್ತೆ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದ ಉಚ್ಚಾಟಿತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬ್ಯಾನರ್ ತೆರವುಗೊಳಿಸಿದ ವಿಚಾರದಲ್ಲಿ ಪೌರಾಯುಕ್ತರಿಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ಬಂಧನದ ಭೀತಿಯಿಂದ ರಾಜೀವ್ ಗೌಡ ತಲೆಮರೆಸಿಕೊಂಡಿದ್ದರು. ಗೌಡರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಮಂಗಳೂರು ರೈಲ್ವೆ ನಿಲ್ದಾಣ ಬಳಿ ರಾಜೀವ ಗೌಡ ಅವರ ಕಾರು ಪತ್ತೆಯಾಗಿತ್ತು. ಗೌಡ ಅವರು ನೆರೆಯ ರಾಜ್ಯವಾದ ಕೇರಳ ಅಥವಾ ಗೋವಾಕ್ಕೆ ತೆರಳಿರಬಹುದೆಂದು ಶಂಕಿಸಲಾಗಿತ್ತು. ಇದೀಗ ರಾಜೀವ್ ಗೌಡ ಅವರು ಪೊಲೀಸರ ಬಲೆಗೆ ಬಿದ್ದಿದ್ದು ಅವರನ್ನು ಚಿಕ್ಕಬಳ್ಳಾಪುರಕ್ಕೆ ಕರೆದು ತರಲಾಗುತ್ತಿದೆ.
ಪೌರಾಯುಕ್ತರಿಗೆ ಬೆದರಿಕೆ ಹಾಕಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಗರಂ ಆಗಿತ್ತು. ಕೆಪಿಸಿಸಿ ಶಿಸ್ತು ಸಮಿತಿಯು ಅವರನ್ನು ಪಕ್ಷದಿಂದ ಅಮಾನತು ಮಾಡಿದೆ. ಈ ನಡುವೆ ತನ್ನ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ರಾಜೀವ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜೀವ ಗೌಡ ಅವರಿಗೆ ಪಕ್ಷ ಹಾಗೂ ಕೋರ್ಟ್ ಕಡೆಯಿಂದ ಹಿನ್ನಡೆಯಾಗಿದೆ.












