3:09 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹೋಟೆಲ್‌ ಪ್ರಚಾರಕ್ಕಾಗಿ ಮಾಂಸಾಹಾರ ಖಾದ್ಯದೊಂದಿಗೆ ಶ್ರೀಕೃಷ್ಣನ ಚಿತ್ರ: ಮೂವರ ಬಂಧನ

21/04/2026, 20:59

ತಿರುವನಂತಪುರಂ(reporterkarnataka.com):ಹೋಟೆಲ್‌ವೊಂದರ ಪ್ರಚಾರಕ್ಕಾಗಿ ಮಾಂಸಾಹಾರಿ ಖಾದ್ಯದ ಜೊತೆಗೆ ಶ್ರೀಕೃಷ್ಣನ ಚಿತ್ರವನ್ನೊಳಗೊಂಡ ‘ವಿಷು’ ಹಬ್ಬದ ಪೋಸ್ಟರ್ ಹಂಚಿಕೊಂಡ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಲಂಬೂರು ಮೂಲದ ಹೋಟೆಲ್‌ ಒಂದು ‘ಕುಝಿ ಮಂದಿ’ ಎನ್ನುವ ಅರೇಬಿಯನ್ ಮಾಂಸಾಹಾರಿ ಖಾದ್ಯದ ಜೊತೆಗೆ ಶ್ರೀಕೃಷ್ಣನ ಚಿತ್ರವನ್ನು ಪ್ರಕಟಿಸಿತ್ತು. ವಿಷಯ ಗೊತ್ತಾಗಿದ್ದು, ಕೂಡಲೇ ‘ಯಮಾಮ ಶವಾಯ’ ಹೋಟೆಲ್‌ನ ಮಾಲೀಕರು ಮತ್ತು ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುವವರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅವರನ್ನು ಮಂಕಡ ಪೊಲೀಸ್ ಠಾಣೆಗೆ ಕರೆಸಿ, ಬಂಧಿಸಲಾಯಿತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತರನ್ನು ಹೋಟೆಲ್ ಮಾಲೀಕರಾದ ಮುಸ್ತಫಾ ಕುಂದುವಾಯಿಲ್ ಮತ್ತು ಶಾಹುಲ್ ಹಮೀದ್ ಹಾಗೂ ಸಾಮಾಜಿಕ ಜಾಲತಾಣ ಖಾತೆ ನಿರ್ವಹಿಸುತ್ತಿದ್ದ ಮುಹಮ್ಮದ್ ಶಾಹಿನ್ ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು