12:38 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಹರಿಯಾಣ ಮೂಲದ ಮಹಿಳೆಯ ಶವ ಕಾರಿನಲ್ಲಿ ಸಾಗಾಟ: ಪತಿ ಸೇರಿ ಮೂವರು ವಶಕ್ಕೆ

16/11/2025, 11:13

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಗಡಿ ಭಾಗ ಮಾಲ್ದಾರೆ – ಪಿರಿಯಪಟ್ಟಣ ಮಾರ್ಗದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಾರನ್ನ ತಡೆದು ತಪಾಸಣೆ ನಡೆಸಿದಾಗ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಲಿಂಗಪುರ ಅರಣ್ಯ ಪ್ರದೇಶದ ಚೆಕ್‌ ಪೋಸ್ಟ್ ಬಳಿ ನಡೆದಿದ್ದು, ಬಳಿಕ ಕಾರಿನಲ್ಲಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಲಿಂಗಪುರ ಎಂಬ ಅರಣ್ಯ ಪ್ರದೇಶ ಚೆಕ್ ಪೋಸ್ಟ್‌ ಬಳಿ ಶುಕ್ರವಾರ ತಡರಾತ್ರಿ 2 ಗಂಟೆ ಆಸುಪಾಸಿನಲ್ಲಿ ಆಲ್ಟೋ-800 ಕಾರೊಂದು ಅನುಮಾನಾಸ್ಪದವಾಗಿ ಓಡಾಟ ನಡೆಸಿತ್ತು. ಚೆಕ್‌ಪೋಸ್ಟ್‌ ಬಳಿ ಸಿಬ್ಬಂದಿಯನ್ನ ನೋಡುತ್ತಿದ್ದಂತೆ ಕಾರನ್ನು ಬೇರೆಡೆಗೆ ತಿರುಗಿಸಿದ್ದರು. ಇದರಿಂದ ಸಂಶಯಗೊಂಡ ಚೆಕ್‌ ಪೋಸ್ಟ್‌ ಸಿಬ್ಬಂದಿ ಕಾರನ್ನು ತಡೆದು ಪರಿಶೀಲಿಸಿದ್ದಾರೆ. ಆ ಬಳಿಕ ಕಾರಿನಲ್ಲಿ ಮಹಿಳೆಯ ಶವ ಇರೋದು ಗೊತ್ತಾಗಿದೆ. ತಕ್ಷಣವೇ ಸಿಬ್ಬಂದಿ ಕೊಡಗಿನ ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳ್ಕಕೆ ಬಂದ ಪೊಲೀಸರು ಕಾರು ಸಮೇತ ಮೂವರನ್ನು ವಶಕ್ಕೆ ಪಡೆದಿದ್ದಾರೆ.

*ಏನಿದು ಘಟನೆ..?*
ಮೂಲತಃ ಹರಿಯಾಣ ನಿವಾಸಿಗಳಾದ ರಾಕೇಶ್ ಕುಮಾರ್ ಮತ್ತು ಆತನ ಪತ್ನಿ ನಾನ್ಕಿದೇವಿ (44) ಇಬ್ಬರೂ, ಉಳಿದ ಇಬ್ಬರು ಸ್ನೇಹಿತರೊಂದಿಗೆ ಮೈಸೂರಿನ ಮೇಟಗಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ವಾಸಿಸುತ್ತಿದ್ದರು. ನಾನ್ಕಿ ದೇವಿಯು ಶುಕ್ರವಾರ ರಾತ್ರಿ ಯಾರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಮನೆ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಂತೆ. ರಾತ್ರಿ ಕೆಲಸ ಮುಗಿಸಿ ಬಂದು ನೋಡಿದಾಗ ಪತಿ ರಾಕೇಶ್ ಕುಮಾರ್‌ಗೆ ಗೊತ್ತಾಗಿದೆ. ಗಾಬರಿಗೊಂಡ ಗಂಡ ಮತ್ತು ಆತನ ಸ್ನೇಹಿತರಾದ ವಿಕಾಸ್ (32) ಸತ್ ವೀರ್ (32), ಮಹಿಳೆಯ ಮೃತದೇಹವನ್ನು ಕೊಡಗಿಗೆ ತಂದಿದ್ದಾರೆ.
ಕೊಡಗಿನ ಮಾಲ್ದಾರೆ ಸಮೀಪದ ಲಿಂಗಪುರ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬರುತ್ತಿರುವ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅರಣ್ಯ ಸಿಬ್ಬಂದಿ ಕಾರನ್ನು ತಪಾಸಣೆ ಮಾಡಿದಾಗ ಮಹಿಳೆಯ ಶವ ಪತ್ತೆಯಾಗಿದೆ.
ಮೂಲಗಳ ಪ್ರಕಾರ, ನಾನ್ಕಿದೇವಿ ಮೂರ್ಛೆ ರೋಗದಿಂದ ಬಳಲುತ್ತಿದ್ರು, ಹಲವು ಬಾರಿ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಪತಿ ರಾಕೇಶ್‌ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು