ಇತ್ತೀಚಿನ ಸುದ್ದಿ
ಥ್ರೋಬಾಲ್ ಪಂದ್ಯಾವಳಿ: ಹಲ್ಯಾಳ ಸರಕಾರಿ ಪ್ರೌಢ ಶಾಲೆ ಮಕ್ಕಳು ಜಿಲ್ಲಾಮಟ್ಟಕ್ಕೆ ಆಯ್ಕೆ
10/09/2024, 22:08
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ
info.reporterkarnataka@gmail.com
ಅಥಣಿಯ ಬೋಜರಾಜ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಹಲ್ಯಾಳ ಸರಕಾರಿ ಪ್ರೌಢ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಂಡದ ಎಲ್ಲಾ ಆಟಗಾರರಿಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ. ಜಿ. ಹತ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್. ಜಿ. ಗಾಣಿಗೇರ ಅವರ ಮಾರ್ಗದರ್ಶನದಲ್ಲಿ ಮತ್ತು ಎಲ್ಲಾ ಶಾಲಾ ಶಿಕ್ಷಕ ಸಿಬ್ಬಂದಿ ಹಾಗೂ ಎಸ್ ಡಿಎಂಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಮಕ್ಕಳನ್ನು ಅಭಿನಂದನೆ ಸಲ್ಲಿಸಿದ್ದಾರೆ.