9:04 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ತುಳುವ ನಾಡಿನ ಪುಣ್ಯ ಭೂಮಿಯ ಧರ್ಮ ರಕ್ಷಣೆ ಮತ್ತು ಅಭಿವೃದ್ಧಿ ನನ್ನ ಗುರಿ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

20/03/2024, 22:53

ಬಂಟ್ವಾಳ(reporterkarnataka.com):ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬುಧವಾರ ಬಂಟ್ವಾಳ ಕ್ಷೇತ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಮಂಡಲದ ಪ್ರಮುಖ ಕಾರ್ಯಕರ್ತರು ಸ್ವಾಗತಿಸಿದರು.

ನಂತರ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಕ್ಯಾಪ್ಟನ್ ಅವರು ಮಾತಾಡುತ್ತಾ ” ಪ್ರತಿಷ್ಠಿತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾನು ಆಯ್ಕೆಯಾಗಿರುವುದು ನನ್ನ ಸೌಭಾಗ್ಯ ಮತ್ತು ಸಹಜವಾಗಿ ನನಗೆ ಸಂತಸ ತಂದಿದೆ. ನನಗೆ ಈ ಅವಕಾಶವನ್ನು ಒದಗಿಸಿಕೊಟ್ಟ ರಾಷ್ಟ್ರ ನಾಯಕರಿಗೆ, ರಾಜ್ಯ ವರಿಷ್ಠರಿಗೆ, ಜಿಲ್ಲೆಯ ಅಧ್ಯಕ್ಷರಿಗೆ, ಪಕ್ಷದ ಹಿರಿಯರಿಗೆ, ಪ್ರಮುಖರಿಗೆ ನಾನು ಅಭಿವಂದನೆಗಳನ್ನು ಸಲ್ಲಿಸುತ್ತೇನೆ. ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿಯ ಬೇರೆ ಬೇರೆ ಸಂಘಟನಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಿರುವ ನಾನು ಪಕ್ಷದ ಹಿರಿಯರ ಮತ್ತು ಯುವ ಕಾರ್ಯಕರ್ತರ ತ್ಯಾಗ ಪರಿಶ್ರಮಗಳನ್ನು ಬಹಳ ಹತ್ತಿರದಿಂದ ಕಂಡಿದ್ದೇನೆ. ಈ ದೇಶ 2047ರಲ್ಲಿ ವಿಕಸಿತ ವಿಶ್ವಗುರು ಭಾರತವಾಗಿ ಪರಿವರ್ತಿಸಲು ಸಂಕಲ್ಪ ತೊಟ್ಟಿರುವ ನಮ್ಮ ಹೆಮ್ಮೆಯ ನರೇಂದ್ರ ಮೋದಿಯವರಿಗೆ ಬಲ ನೀಡಲು ನಾನು ಕಟಿಬದ್ಧನಾಗಿದ್ದೇನೆ. ತುಳುವ ನಾಡಿನ ಪುಣ್ಯ ಭೂಮಿಯ ಧರ್ಮ ರಕ್ಷಣೆ ಮತ್ತು ಅಭಿವೃದ್ಧಿ ನನ್ನ ಮುಂದಿನ ಗುರಿ. ಕಾರ್ಯಕರ್ತರ ಕಷ್ಟಗಳಿಗೆ, ನೋವುಗಳಿಗೆ ಸ್ಪಂದಿಸುವವನಾಗಿ ನಿಮ್ಮ ಜೊತೆಯಲ್ಲಿರುತ್ತೇನೆ. ಬಂಟ್ವಾಳ ಕ್ಷೇತ್ರದ ಸವಾಲುಗಳೇನು, ಕಾರ್ಯಕರ್ತರ ಭಾವನೆಗಳೇನು ಎಂಬುವುದರ ಅರಿವು ನನಗಿದೆ. ಈ ಚುನಾವಣಾ ಮಹಾ ಸಮರದಲ್ಲಿ ನಾವೆಲ್ಲಾ ಒಂದಾಗಿ ಶ್ರಮಿಸಿ ಜಯಗಳಿಸೋಣ ” ಎ೦ದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ಶುಭ ಕೋರುತ್ತಾ ” ನಮಗೆ ಗೆಲುವು ನಿಶ್ಚಿತ. ಆದರೆ ಮೈಮರೆವು ಸಲ್ಲದು. ಗೆಲುವಿಗಾಗಿ ಕಾರ್ಯಕರ್ತರ ಪರಿಶ್ರಮ ದ್ವಿಗುಣಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಪ್ರವಾಸ ಮಾಡಿ, ಜನಜಾಗೃತಿಗೊಳಿಸುವ ಮೂಲಕ ನರೇಂದ್ರ ಮೋದಿಯವರನ್ನು 3ನೇ ಭಾರಿ ಪ್ರಧಾನಿ ಮಾಡುವುದಕ್ಕಾಗಿ ಬ್ರಿಜೇಶ್ ಚೌಟರನ್ನು ಸಂಸದರಾಗಿ ಗೆಲ್ಲಿಸೋಣ” ಎಂದರು.
ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ವಿಶ್ವಮಾನ್ಯ ನಾಯಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದಕ್ಕಾಗಿ ಯುವ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ಬಿಜೆಪಿ ರಾಷ್ಟ್ರೀಯ ವರಿಷ್ಠರು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಕಳೆದ ಭಾರಿ ಬಂಟ್ಟಾಳದಲ್ಲಿ ನಳಿನ್ ಕುಮಾರ್ ಕಟೀಲ್ ರವರಿಗೆ 31000 ಮತಗಳ ಮುನ್ನಡೆ ನೀಡಲಾಗಿದ್ದು, ಈ ಸಲ 50000 ಮತಗಳ ಮುನ್ನಡೆಯೊಂದಿಗೆ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರಾದ ನಾವೆಲ್ಲ ಶ್ರಮಿಸೋಣ ಎಂದು ಹೇಳಿದರು.
ಕ್ಷೇತ್ರ ಬಿಜೆಪಿ ವತಿಯಿಂದ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಬ್ರಿಜೇಶ್ ಚೌಟರವರಿಗೆ ಶಾಲು ಹಾಕಿ ಅಭಿನಂದಿಸಿದರು.
ವೇದಿಕೆಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಬಂಟ್ವಾಳ ಮಂಡಲ ಪ್ರಭಾರಿ ಪೂಜಾ ಪೈ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್, ಹರಿಕೃಷ್ಣ ಬಂಟ್ವಾಳ, ರಾಜ್ಯ ನಾಯಕರಾದ ವಿಕಾಸ್ ಪುತ್ತೂರು, ಯುವ ಚಾಪಾಲ್ ಕಾರ್ಯಕ್ರಮದ ಜಿಲ್ಲಾ ಪ್ರಭಾರಿ ಸಂದೇಶ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ, ಡೊಂಬಯ ಅರಳ, ಪ್ರಮುಖರಾದ ಚೆನ್ನಪ್ಪ ಕೋಟ್ಯಾನ್ ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ರಾಮದಾಸ್ ಬಂಟ್ವಾಳ್, ತುಂಗಪ್ಪ ಬಂಗೇರ ಸಂಜಯ ಪ್ರಭು, ದೇವದಾಸ್ ಶೆಟ್ಟಿ, ದಿನೇಶ್ ಅಮ್ಟೂರು, ಲಕಿತಾ ಶೆಟ್ಟಿ, ವಸಂತ ಪೂಜಾರಿ, ಶ್ರೀಮತಿ ಕಮಲಾಕ್ಷಿ ಪೂಜಾರಿ, ಮಾದವ ಮಾವೆ, ಗಣೇಶ್ ರೈ ಚಿದಾನಂದ ರೈ ಸೀತಾರಾಮ ಪೂಜಾರಿ ರಮಾನಾಥ ರಾಯಿ ಪುರುಷೋತ್ತಮ ಶೆಟ್ಟಿ ಜಯರಾಮ ನಾಯ್ಕ ರೋನಾಲ್ಡ್ ಡಿ ಸೋಜಾ ಚಂದ್ರಾವತಿ ಪೊಳಲಿ ಹರ್ಷಿಣಿ ಭಾರತಿ ಚೌಟ ಮಮತಾ ಬಾಳ್ತಿಲ ಶೋಭಾ ಬೋಳಂತೂರು ರಂಜಿತ್ ಮೈರ ಯಶೋಧರ ಕರ್ಬೆಟ್ಟು ಮೋಹನ್ ಪಿ ಎಸ್ ಆನಂದ ಶಂಭೂರು ವಿಶ್ವನಾಥ ಪೂಜಾರಿ ಕಟ್ಟತ್ತಿಲ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು