6:25 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ತುಳುನಾಡಿನ ದೈವ ಧರ್ಮ, ಸಂಸ್ಕೃತಿ ಅನನ್ಯ: ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುತಾಲಿಕ್

25/01/2023, 20:42

ಕಾರ್ಕಳ(reporterkarnataka.com): ಕಲಾ ಸವ್ಯಸಾಚಿ ಪ್ರಶಾಂತ್‌ ಸಿ.ಕೆ. ಅವರಿಗೆ ಹಿರ್ಗಾನ ಕುಂದೇಶ್ವರ ಕ್ಷೇತ್ರದಿಂದ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಮಾತನಾಡಿ, ಕರಾವಳಿಯ ಸಂಸ್ಕೃತಿಯು ಜಗದ್ವಿಖ್ಯಾತವಾಗುತ್ತಿದೆ. ದೈವ, ಆಧ್ಯಾತ್ಮ, ಭಜನೆ. ಪೂಜೆ ಪುನಸ್ಕಾರಗಳಿಂದಾಗಿ ಕರಾವಳಿ ನಿಜವಾಗಿಯೂ ದೇವರನಾಡು. ಕರಾವಳಿಯಲ್ಲಿ ಭಜನೆ ಮೂಲಕ ಆಧ್ಯಾತ್ಮಿಕ ವಿಚಾರಧಾರೆ ಪಸರಿಸುತ್ತಿವೆ. ಒಂದಿಲ್ಲ ಒಂದು ಕಾರ್ಯಕ್ರಮಗಳಿಂದ ವರ್ಷವಿಡೀ ಹಬ್ಬದಂತೆ ಆಚರಿಸುವ ಪುಣ್ಯ ಕ್ಷೇತ್ರಕ್ಕೆ ಆಕಸ್ಮಿಕವಾಗಿ ಬಂದೆ. ಕುಂದೇಶ್ವರ ದರ್ಶನದಿಂದ ಪುನೀತನಾದೆ ಎಂದರು.


ಗುರುರಕ್ಷಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ಹಿಂದೆಲ್ಲ ಯಕ್ಷಗಾನದ ಮೂಲಕ ಪುರಾಣ, ಮಹಾಗ್ರಂಥಗಳ ಸಾರವನ್ನು ತಿಳಿದುಕೊಳ್ಳುತ್ತಿದ್ದೆವು. ದೇಶದ ಜನರನ್ನು ಸೆಳೆಯುತ್ತಿರುವ ತುಳುನಾಡು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಹಿಂದುಗಳ ಪುಣ್ಯಭೂಮಿ ಆಗಿದೆ ಎಂದು ಹೇಳಿದರು.

ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಯಕ್ಷಗಾನ, ನಾಟಕ, ಸಿನಿಮಾ ಕ್ಷೇತ್ರದಲ್ಲಿ ರಚನೆಕಾರ, ನಿರ್ದೇಶಕ, ಕಲಾವಿದನಾಗಿ, ಕಿರುತೆರಯಲ್ಲಿ ಹಾಸ್ಯ ಧಾರವಾಹಿಗಳ ನಿರ್ದೇಶಕನಾಗಿ ಹಾಸ್ಯ ಕಲಾವಿದನಾಗಿ ಕರಾವಳಿಯಾದ್ಯಂತ ಜನಮೆಚ್ಚುಗೆ ಗಳಿಸುತ್ತಿರುವ ಪ್ರತಿಭೆಯ ಖನಿ ಪ್ರಶಾಂತ್‌ ಸಿ.ಕೆ. ಅವರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ಸಿಕ್ಕರೆ ದೇಶಾದ್ಯಂತ ಮನ್ನಣೆಗಳಿಸುವುದರಲ್ಲಿ ಸಂಶಯ ಇಲ್ಲ ಎಂದರು.
ಪ್ರಶಸ್ತಿ ಸ್ವೀಕರಿಸಿದ ಕಲಾ ಸವ್ಯಸಾಚಿ ಪ್ರಶಾಂತ್‌ ಸಿ.ಕೆ. ಮಾತನಾಡಿ, ನನ್ನ ತಂದೆ -ತಾಯಿ, ಪತ್ನಿ, ಮಕ್ಕಳ ತ್ಯಾಗವಿದೆ. ನನ್ನ ಜತೆ, ಗುರುಗಳು, ಹಿರಿಯರು, ಕಿರಿಯರು ನನ್ನ ಕಲಾ ಬದುಕಿನಲ್ಲಿ ಬೆನ್ನೆಲುಬಾಗಿ ನಿಂತಿದ್ದಾರೆ. ನನ್ನ ಕಲಾಸೇವೆ ಗುರುತಿಸಿ ಈ ಮಹಾನ್‌ ಪ್ರಶಸ್ತಿಗೆ ಆಯ್ಕೆ ಮಾಡಿದವರಿಗೆ ಕೃತಜ್ಞತೆಗಳು ಎಂದು ನುಡಿದರು.


ಕೆ.ಪಿ. ಲಕ್ಷ್ಮೀನಾರಾಯಣ ಪ್ರಾರ್ಥಿಸಿದರು. ಧರ್ಮದರ್ಶಿ ಕೃಷ್ಣರಾಜೇಂದ್ರ ಭಟ್‌, ವೇದಮೂರ್ತಿ ರವೀಂದ್ರ ಭಟ್‌, ಉದ್ಯಮಿ ಸಿರಿಯಣ್ಣ ಶೆಟ್ಟಿ, ಪ್ರಗತಿಪರ ಕೃಷಿಕ ಸತೀಶ್‌ ಭಟ್‌ ಕುಂದೇಶ್ವರ, ಕದ್ರಿ ಯಕ್ಷಕೂಟ ಸಂಚಾಲಕ ರಾಮಚಂದ್ರ ಭಟ್‌ ಎಲ್ಲೂರು, ಸುಧೀಂದ್ರ ಭಟ್‌, ಕುಂಜತ್ತೋಡಿ ವಾಸುದೇವ ಭಟ್‌ ಕದ್ರಿ, ಗ್ರಾಮ ಪಂಚಾಯಿತಿ ಸದಸ್ಯರ ಮಹಾವೀರ ಕಟ್ಟಡ, ಗಂಗಾ ಆರ್.ಭಟ್‌, ರಂಜಿನಿ, ರಂಗಿಣಿ ಉಪೇಂದ್ರ ರಾವ್‌ ಇದ್ದರು.
ಹಿರಣ್ಯಾಕ್ಷ ಹಿರಣ್ಯ ಕಶಿಪು ಕನ್ನಡ- ತುಳು ಯಕ್ಷಗಾನ ನಡೆಯಿತು. ಪ್ರಾಪ್ತಿ ಕಲಾವಿದೆರ್‌ ಕುಡ್ಲ ತಂಡದವರಿಂದ ಮಾಯದಪ್ಪೆ ಮಂತ್ರದೇವತೆ ತುಳು ನಾಟಕ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಹೋಮ್‌ಗಾರ್ಡ್‌ ಕಮಾಂಡೆಂಟ್‌ ಡಾ.ಮುರಲೀ ಮೋಹನ ಚೂಂತಾರು, ಉದಯಕೃಷ್ಣ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಮುನಿಯಾಲು ಉದಯ ಕುಮಾರ್‌ ಶೆಟ್ಟಿ, ಹಿರ್ಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ವರ್ಷಾವಧಿ ಜಾತ್ರೆ, ರಂಗಪೂಜೆ, ದರ್ಶನ ಬಲಿ, ನೇಮೋತ್ಸವ, ಕಟ್ಟೆಪೂಜೆ ಸಂಭ್ರಮದಿಂದ ನಡೆಯಿತು.
ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಕಲಾ ಸವ್ಯಸಾಚಿ ಪ್ರಶಾಂತ್‌ ಸಿ.ಕೆ. ಅವರಿಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಮೋದ್‌ ಮುತಾಲಿಕ್‌, ಮಂಜುನಾಥ ಪೂಜಾರಿ, ಜಿತೇಂದ್ರ ಕುಂದೇಶ್ವರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು