ಇತ್ತೀಚಿನ ಸುದ್ದಿ
ತುಮಕೂರು: ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವು; 11 ಜನ ಗಂಭೀರ
25/08/2022, 11:34
ತುಮಕೂರು(reporterkarnataka.com): ಕ್ರೂಸರ್ ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ.
ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಮತ್ತು ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ.
ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 9 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.














