10:45 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ತುಮಕೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ-2024: ಸಿಎಂ ಸಿದ್ದರಾಮಯ್ಯ ಲಾಂಛನ ಅನಾವರಣ

14/11/2024, 19:47

ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಸಂಘ ಮತ್ತು ಜಿಲ್ಲಾಡಳಿತ ತುಮಕೂರು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯಮಟ್ಟದ ಕ್ರೀಡಾಕೂಟದ
ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿಯಲ್ಲಿ ಅನಾವರಣಗೊಳಿಸಿದರು.
ತುಮಕೂರಿನಲ್ಲಿ ಡಿಸೆಂಬರ್ ನಲ್ಲಿ ಆಯೋಜಿಸಲಿರುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಅಗತ್ಯ ಪೂರ್ವ ಸಿದ್ಧತೆಯನ್ನು ನಡೆಸುತ್ತಿದ್ದು ಉದ್ಘಾಟಿಸಲು ಸಮಯವಕಾಶ ಕೊಡಬೇಕೆಂದು ಮುಖ್ಯಮಂತ್ರಿಗಳನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿತು.
ಡಿಸೆಂಬರ್ ನಲ್ಲಿ ಸಮ್ಮೇಳನ ಮಾಡಿದರೆ ಅಧಿವೇಶನ ಇರುವುದರಿಂದ ಬರುವುದು ಕಷ್ಟವಾಗಬಹುದು. ಜನವರಿಯಲ್ಲಿ ಮಾಡಿದರೆ ಖಂಡಿತವಾಗಿ ಬರುತ್ತೇನೆ. ಅಗತ್ಯ ಸಹಕಾರವನ್ನು ಕೊಡಲು ತಿಳಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಮತ್ತೊಮ್ಮೆ ಶುಭ ಹಾರೈಸಿದರು.
ಸಂಘದ ಜಿಲ್ಲಾಧ್ಯಕ್ಷ ಚಿ. ನಿ. ಪುರುಷೋತ್ತಮ್ ಹಾಗೂ ರಾಷ್ಟ್ರೀಯ ಮಂಡಳಿ ಸದಸ್ಯರಾದ ಅನು ಶಾಂತರಾಜು, ಟಿ.ಎನ್. ಮಧುಕರ್ , ಡಿ.ಎಂ.ಸತೀಶ್ ಮತ್ತು ಪದಾಧಿಕಾರಿಗಳು ನಿಯೋಗದಲ್ಲಿದ್ದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರನ್ನು ಕ್ರೀಡಾಕೂಟಕ್ಕೆ ಆಹ್ವಾನಿಸಲಾಯಿತು.ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಹಿಮಂತರಾಜು, ಕ್ರೀಡಾ ಸಮಿತಿ ಮುಖ್ಯ ಸಂಚಾಲಕರಾದ ಸತೀಶ್ ಹಾರೋಗೆರೆ, ಯಶಸ್ ಪದ್ಮನಾಭ್, ಎಸ್. ಹರೀಶ್ ಆಚಾರ್ಯ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು