11:57 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ತುಂಬೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಫೆ. 15ರಂದು ಉಚಿತ ವೈದ್ಯಕೀಯ, ನೇತ್ರ ತಪಾಸಣೆ ರಕ್ತದಾನ ಶಿಬಿರ

12/02/2026, 22:13

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ತುಂಬೆ ಶಾಖೆಯ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರವನ್ನು ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ, ತುಂಬೆ ಸರಕಾರಿ ಶಾಲಾಭಿವೃದ್ದಿ ಸಮಿತಿ, ಭಾಗ್ಯೊದಯ ಮಿತ್ರ ಕಲಾ ವೃಂದ (ರಿ) ತುಂಬೆ, ಆಶೀರ್ವಾದ ಸೇವಾ ಸಂಘ ಮತ್ತು ಮಹಿಳಾ ಸೇವಾ ಸಂಘ ತುಂಬೆ, ಯುವ ಶಕ್ತಿ ಮಜಿ, ಶ್ರೀ ಪಿಲಿಚಂಡಿ ತಾಯೇಶ್ವರಿ ಸೇವಾ ಸಮಿತಿ ತಂಜಕರಿಯ, ತುಂಬೆರವರ ಜಂಟಿ ಸಹಯೋಗದೊಂದಿಗೆ ಫೆ.15ರಂದು ಪೂರ್ವಾಹ್ನ 9 ರಿಂದ ಮದ್ಯಾಹ್ನ 12.30ರ ವರೆಗೆ ತುಂಬೆಯ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹೃದಯ ಸಂಬಂಧಿ ಕಾಯಿಲೆ, ರಕ್ತದಾನ ಶಿಬಿರ ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು