ಇತ್ತೀಚಿನ ಸುದ್ದಿ
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ ವ್ಯಾಪ್ತಿಯಲ್ಲಿ ರೇಶನಿಂಗ್ ಜಾರಿ
03/05/2024, 21:33
ಮಂಗಳೂರು(reporterkarnataka.com): ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಈಗಾಗಲೇ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮೇ 5ರಿಂದ ರೇಶನಿಂಗ್ ಜಾರಿಗೆ ಬರಲಿದೆ.
ಲಭ್ಯವಿರುವ ನೀರನ್ನು ಮಂಗಳೂರು ನಗರ ಹಾಗೂ ಸುರತ್ಕಲ್ ಸುತ್ತಮುತ್ತಲಿನ ಪ್ರದೇಶಗಳಿಗೆ ಸರಬರಾಜು ಮಾಡುವ ನಿಟ್ಟಿನಲ್ಲಿ ಪರ್ಯಾಯ ದಿನಗಳಲ್ಲಿ ನೀರು ಬಿಡಲು ಕ್ರಮ ಕೈಗೊಳ್ಳಲಾಗಿದೆ. ಕಟ್ಟಡ ರಚನೆ, ಇತರ ನಿರ್ಮಾಣ ಕಾರ್ಯ ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ ಗಳ ನೀರಿನ ಸಂಪರ್ಕವನ್ನು ಮುಂದಿನ ಆದೇಶದವರೆಗೆ ಕಡಿತಗೊಳಿಸಲು ಸೂಚಿಸಲಾಗಿದೆ. ಸಾರ್ವಜನಿಕ ರು ಅನಾವಶ್ಯಕವಾಗಿ ನೀರು ಪೋಲು ಮಾಡುವುದು ಕಂಡು ಬಂದರೆ ನೀರಿನ ಸಂಪರ್ಕವನ್ನು ಕಡಿತಗೊಳಿಸಲು ಸೂಚಿಸಲಾಗಿದೆ ಎಂದು ಪಾಲಿಕೆ ಕಮಿಷನರ್ ಪ್ರಕಟಣೆ ತಿಳಿಸಿದೆ.