4:36 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತುಂಬೆ ವೆಂಟೆಂಡ್ ಡ್ಯಾಮ್ ನಲ್ಲಿ ನೀರಿನ ಮಟ್ಟ ತೀವ್ರ ಕುಸಿತ: ಕಡಲನಗರಿಯಲ್ಲಿ ಜಲಕ್ಷಾಮ; ರೇಶನಿಂಗ್ ಜಾರಿ

05/05/2023, 14:49

ಮಂಗಳೂರು(reporterkarnataka.com):ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ತೀವ್ರ ಜಲಕ್ಷಾಮ ಎದುರಾಗಿದೆ. ಈ ನಡುವೆ ಮಂಗಳೂರಿನಲ್ಲಿ ರೇಶನಿಂಗ್ ಪದ್ಧತಿ ಜಾರಿಗೊಳಿಸಲಾಗಿದೆ.
ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿರುತ್ತದೆ ಎಂದು ತಿಳಿಸಲಾಗಿದೆ.
ನೀರಿನ ಅಭಾವದ ಸಾಧಕ ಭಾದಕಗಳನ್ನು ಪರಿಶೀಲಿಸಿ ಜಿಲ್ಲಾಡಳಿತದ ಸಭೆಯಲ್ಲಿ ಈ ಕೆಳಗಿನಂತೆ ನಿರ್ಣಯಗಳನ್ನು ಕೈಗೊಳ್ಳಲಾಗಿರುತ್ತದೆ.
* ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ (Alternative Days) ನೀರು ಬಿಡಲು ನಿರ್ಣಯಿಸಲಾಗಿದೆ.

* ಕಟ್ಟಡ ರಚನೆ, ಇತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ ಗಳ ಜೋಡಣೆಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು. ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ, ಜೋಡಣೆ ಕಡಿತಗೊಳಿಸುವುದು.

*ದಿನಾಂಕ 05.05.2023 ರಂದು ಮಂಗಳೂರು ನಗರ ಉತ್ತರಕ್ಕೆ, ದಿನಾಂಕ 06.05.2023 ರಂದು ಮಂಗಳೂರು ನಗರ ದಕ್ಷಿಣ, ನಂತರ ಕ್ರಮಾನುಗತವಾಗಿ ಮೇಲೆ ತಿಳಿಸಿದಂತೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿರುತ್ತದೆ.
ಲಭ್ಯವಿರುವ ನೀರನ್ನು ಮೇಲೆ ತಿಳಿಸಿದಂತೆ ಪೂರೈಕೆ ಮಾಡುವುದು ಅನಿವಾರ್ಯವಾಗಿದ್ದು ಸಾರ್ವಜನಿಕರು ಮೇಲಿನ ವಿಷಯವನ್ನು ಮನಗಂಡು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು