7:38 AM Thursday1 - January 2026
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿಕ ಸಾವು: ತೀರ್ಥಹಳ್ಳಿಯ ದೇವಂಗಿ ಬಳಿ ದುರ್ಘಟನೆ

31/07/2024, 20:06

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ.
ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.
ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು ಆಗಲಿದ್ದಾರೆ.
ತುಂಗಾ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು ಇದೆ ನದಿಯ ವ್ಯಾಪ್ತಿಗೆ ಬರುವ ಉಂಟೂರು ಹಳ್ಳದಲ್ಲೂ ಭಾರೀ ನೀರು ಹರಿಯುತ್ತಿದ್ದು ಮಂಗಳವಾರ ಸಂಜೆ ದೇವಂಗಿಗೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಬರುವಾಗ ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಮನೆಯವರೆಲ್ಲ ರಾತ್ರಿ ಇಡೀ ಹುಡುಕಿದರೂ ಪತ್ತೆಯಾಗಿರಲಿಲ್ಲ. ಮಂಗಳವಾರ ಸುರಿದ ಮಳೆಗೆ ಹಳ್ಳದಲ್ಲಿ ನೆರೆ ಬಂದಿತ್ತು. ಕಾಲು ಜಾರಿ ಹಳ್ಳಕ್ಕೆ ಬಿದ್ದು ತೇಲಿ ಹೋಗಿದ್ದು ಬುಧವಾರ ಬೆಳಗ್ಗೆ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೈಲಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆಶಾಲತಾ, ಕಂದಾಯ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್, ಆರ್ ಐ ಸುಗುಣೇಶ್, ಪಟ್ಟಣ ಪಂಚಾಯತ್ ಸದಸ್ಯ ಹಾಗೂ ಯಕ್ಷಗಾನ ಕಲಾವಿದರಾದ ಬಿ ಗಣಪತಿ ಸೇರಿ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು