12:09 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ತುಮಕೂರಿನಲ್ಲಿ ಬೆಳ್ತಂಗಡಿಯ 3 ಮಂದಿಯ ಹತ್ಯೆ: ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಗ್ರಹ

27/03/2024, 21:48

ಮಂಗಳೂರು(reporterkarnataka.com): ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
“ದುಷ್ಕರ್ಮಿಗಳ ತಂಡವೊಂದು ಮೋಸದಿಂದ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು ಯುವಕರನ್ನು ತುಮಕೂರಿಗೆ ಕರೆಸಿ ಹಣ ದೋಚಿ ಹತ್ಯೆ ಮಾಡಿದೆ. ಪತ್ರಿಕೆ ವರದಿಗಳ ಮೂಲಕ ಹತ್ಯೆಗೀಡಾದವರು 6 ಲಕ್ಷ ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಕೊಲೆಗಡುಕರು 60 ಲಕ್ಷದಿಂದ 1 ಕೋಟಿ ರೂ.ವರೆಗೆ ದೋಚಿದ್ದಾರೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕು. ಮೋಸದ ಜಾಲದ ಹಿಂದಿರುವ ನೈಜ್ಯ ಆರೋಪಿಗಳನ್ನು ಬಂಧಿಸಬೇಕು. ಆ ಮೂಲಕ ಈ ಮೂರು ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮನಪಾ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ಇದ್ದರು. ಇದಕ್ಕೂ ಮುನ್ನ ಕೊಲೆಯಾದ ಬೆಳ್ತಂಗಡಿಯ ಮೂವರು ಯುವಕರ ಮನೆಗೆ ಭೇಟಿ ನೀಡದ ನಿಯೋಗ, ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತು.

ಇತ್ತೀಚಿನ ಸುದ್ದಿ

ಜಾಹೀರಾತು