2:23 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ದುರಸ್ತಿ: ನೀರಿನೊಳಗೆ ಕೆಲಸ ಮಾಡುವ ಪರಿಣಿತರ ತಂಡ ಸಿದ್ಧ

12/08/2024, 22:21

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ತುಂಗಭದ್ರ ಅಣೆಕಟ್ಟೆಯಲ್ಲಿರುವ ನೀರನ್ನು ಉಳಿಸುವ ಉದ್ದೇಶದಿಂದ ನೀರಿನೊಳಗೆ ಪ್ಲೇಟ್ ಇಳಿಸಲು ನಿರ್ಧರಿಸಲಾಗಿದ್ದು, ಪರಿಣಿತ ತಂಡ ಒಂದನ್ನು ಸ್ಥಳಕ್ಕೆ ಕರೆಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ 98,000 ಕ್ಯೂಸೆಕ್  ನೀರನ್ನು ನದಿಗೆ ಬಿಡಲಾಗುತ್ತಿದ್ದು,  ಪರಿಣಾಮವಾಗಿ ಎರಡುವರೆ ಅಡಿ ಗೇಜ್ ಕಡಿಮೆಯಾಗಿದೆ. ಇಂದು ಬೆಳಿಗ್ಗೆಯಿಂದ ನದಿಗೆ 1.40 ಲಕ್ಷ ಕ್ಯೂ ಸೆಕ್ ನೀರನ್ನು ಬಿಡಲಾಗುತ್ತಿದೆ ಎಂದರು.
ಒಂದು ತಂಡ ನೀರು ಕಡಿಮೆಯಾದ ಬಳಿಕ ಗೇಟ್  ಅಳವಡಿಕೆ ಬಗ್ಗೆ ಸಲಹೆ ನೀಡಿದೆ. ನೀರನ್ನು ಉಳಿಸುವ ಉದ್ದೇಶದಿಂದ ನಾನು ಹಾಗೂ ಸಂಸದರು ತಡರಾತ್ರಿವರೆಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜಿಂದಾಲ್ ನಿಂದ ಪರಿಣಿತ ತಂತ್ರಜ್ಞರು ಹಾಗೂ ಇಂಜಿನಿಯರ್ ಗಳ ತಂಡವನ್ನು ಸೋಮವಾರ ರಾತ್ರಿಯೇ ಕರೆಸಿಕೊಂಡಿದ್ದೇವೆ. ಆ ತಂಡ ನೀರು ಖಾಲಿಯಾಗದಂತೆ ನೀರಿನೊಳಗೆ ಕೆಲಸ ಮಾಡುವ ಬಗ್ಗೆ ಸಲಹೆ ನೀಡಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗನಿರಂತರವಾಗಿ ಸಂಪರ್ಕದಲ್ಲಿದ್ದೇವೆ.  ಮುಖ್ಯಮಂತ್ರಿಗಳ ಜೊತೆ ಕೂಡ ರಾತ್ರಿಯೇ ಚರ್ಚೆ ನಡೆಸಿದ್ದು ಅವರು ಕೂಡ ಕೆಲವೊಂದು ಸಲಹೆ ನೀಡಿದ್ದು ಜಿಂದಾಲ್ ತಾಂತ್ರಿಕ ತಂಡದೊಂದಿಗೂ  ಫೋನ್ನಲ್ಲಿ ಚರ್ಚಿಸಿದ್ದಾರೆ ಎಂದು ತಿಳಿಸಿದರು.
ಅಣೆಕಟ್ಟೆಯ ಮೇಲೆ ಕೆಲಸ ಮಾಡುವುದರಿಂದ ಕ್ರೇನ್ ನನ್ನು ಬಳಕೆ ಮಾಡಬೇಕಾಗುತ್ತದೆ. ಇದರಿಂದ ಸೇತುವೆ ಮೇಲೆ ಒತ್ತಡ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಎಷ್ಟು ತೂಕದ ಕ್ರೇನನ್ನು ಬಳಸಬೇಕು ಎಂಬುದರ ಬಗ್ಗೆಯೂ ಕೂಡ ಚರ್ಚೆ ನಡೆದಿದೆ. ಈ ಸಂಬಂಧ ಪ್ಲೇಟ್ ಸಿದ್ದಪಡಿಸಲಾಗುತ್ತಿರುವ ಸ್ಥಳಕ್ಕೆ ಕೂಡ ನಾನು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಪರಿಣಿತ ತಜ್ಞ ಕನ್ನಯ್ಯ ನಾಯ್ಡು ಅವರು ಡಿಸೈನ್ ಕಳಿಸಿದ್ದು ಅದರಂತೆ ಸ್ಥಳೀಯವಾಗಿ ನಾರಾಯಣ ಇಂಜಿನಿಯರಿಂಗ್ ಹಾಗೂ ಹಿಂದುಸ್ತಾನ್ ಸಂಸ್ಥೆ ಗಳು ಪ್ಲೇಟ್ ಸಿದ್ಧಪಡಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು