10:19 PM Saturday20 - September 2025
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

ಇತ್ತೀಚಿನ ಸುದ್ದಿ

ಟಿಕೆಟ್ ಅಸಮಾಧಾನ: ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭೇಟಿ

06/04/2024, 15:05

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಭೇಟಿ ನೀಡಿದರು. ಈ ವೇಳೆ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಸಿ.ರಘುಚಂದನ್ ಹಾಗೂ ಶಾಸಕ ಎಂ.ಚಂದ್ರಪ್ಪ ಜೊತೆ ಸೌಹಾರ್ದ ಮಾತುಕತೆ ನಡೆಸಿದರು.
ಈ ವೇಳೆ ಸುದ್ದಿಗಾರರ ಜೊತೆಗೆ ಮಾತನಾಡಿದ ಗೋವಿಂದ ಎಂ.ಕಾರಜೋಳ, ‘ನಾನು ಚಂದ್ರಪ್ಪ ಒಂದೇ ತಾಟಿನಲ್ಲಿ ಉಂಡವರು. ಕೆಲ ಪರಿಸ್ಥಿತಿ ಹಾಗೂ ಆವೇಶದಲ್ಲಿ ಕೆಲ ಮಾತುಗಳು ಬರುತ್ತವೆ. ಅವನ್ನು ಯಾರೂ ಮನಸ್ಸಿಗೆ ತೆಗೆದುಕೊಳ್ಳುವುದು ಬೇಡ’ ಎಂದು ಮನವಿ ಮಾಡಿದರು.
‘ಸಹೋದರ ಚಂದ್ರಪ್ಪ ಸುಪುತ್ರ ರಘುಚಂದನ್ ಯುವಕ, ಆಶಾವಾದಿ. ಸತತ ಹೋರಾಟ ಮಾಡಿಕೊಂಡು ಬಂದವರು. ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ, ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಯಾವುದೋ ಲೆಕ್ಕಾಚಾರದಲ್ಲಿ ನನಗೆ ಟಿಕೆಟ್‌ ನೀಡಿದರು. ಆದರೆ, ನಾನು ಬೇಡ ಎಂದು ಹೇಳಿದ್ದೆ. ಆದರೆ, ಪಕ್ಷದ ರಾಷ್ಟ್ರೀಯ ನಾಯಕರು, ನಾನು ಯಾರ ಮಾತು ಮೀರುವುದಿಲ್ಲವೋ ಅವರು ನಿಲ್ಲಲೇಬೇಕು ಎಂದಾಗ ಅನಿವಾರ್ಯವಾಗಿ ಬಂದು ನಾಮಪತ್ರ ಸಲ್ಲಿಸಿದ್ದೇನೆ’ ಎಂದರು.
‘ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು. ಈ ನಿಟ್ಟಿನಲ್ಲಿ ಶಾಸಕರಾದ ಎಂ.ಚಂದ್ರಪ್ಪ ಹಾಗೂ ಅವರ ಪುತ್ರ ರಘುಚಂದನ್ ಇಬ್ಬರೂ ಬೆಂಬಲವಾಗಿ ನಿಂತಿದ್ದಾರೆ’ ಎಂದು ತಿಳಿಸಿದರು.
ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಸಿ.ರಘುಚಂದನ್ ಮಾತನಾಡಿ, ‘ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರಿಗೆ ಮಾತು ಕೊಟ್ಟಿದ್ದೇವೆ. ಜೀವ ಹೋದರೂ ಮಾತಿಗೆ ತಪ್ಪಲ್ಲ. ನಮ್ಮ ಮಾತಿಗೆ ಬದ್ಧರಾಗಿ ಗೋವಿಂದ ಎಂ.ಕಾರಜೋಳ ಅವರ ಪರವಾಗಿ ಚುನಾವಣೆ ನಡೆಸುತ್ತೇವೆ’ ಎಂದರು ‘ಗೋವಿಂದ ಕಾರಜೋಳ ಅವರನ್ನು ಗೆಲ್ಲಿಸುತ್ತೇವೆ. ಹೊರಗೊಂದು, ಒಳಗೊಂದು ಮಾಡುವುದಿಲ್ಲ. ಅವರು ಹೇಳಿದ ಕಡೆಗಳಲ್ಲಿ ಕೆಲಸ ಮಾಡುತ್ತೇನೆ. ನಾನು ರಾಜ್ಯಸಭೆ, ಪರಿಷತ್‌ ಆಸೆ ಇಟ್ಟುಕೊಂಡಿಲ್ಲ. ಜನರ ನಡುವೆ ಬೆಳೆದವರು. ಚುನಾವಣೆಯ ಮೂಲಕವೇ ರಾಜಕಾರಣ ಮಾಡುತ್ತೇವೆ’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು