11:29 AM Sunday3 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ಬಿಗಿ ಪೊಲೀಸ್ ಬಂದೋಬಸ್ತ್: ಕೊಳತ್ತಮಜಲು ಜುಮ್ಮಾ ಮಸೀದಿಯಲ್ಲಿ ನೆರವೇರಿದ ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಅಂತ್ಯ ಸಂಸ್ಕಾರ

28/05/2025, 22:29

ಬಂಟ್ವಾಳ(reporterkarnataka.com): ದುಷ್ಕರ್ಮಿಗಳಿಂದ ಬೀಕರವಾಗಿ ಹತ್ಯೆಗೀಡಾದ ಪಿಕ್ ಅಪ್ ಚಾಲಕ ಅಬ್ದುಲ್ ರಹಿಮಾನ್ ಅವರ ಅಂತ್ಯಸಂಸ್ಕಾರ ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಬುಧವಾರ ಕೊಳತ್ತಮಜಲು ಜುಮ್ಮಾ ಮಸೀದಿಯಲ್ಲಿ ನಡೆಯಿತು.


ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದ ಮೃತ ಅಬ್ದುಲ್ ರಹಿಮಾನ್ ಅವರ ಅಂತ್ಯಸಂಸ್ಕಾರ ಇದೇ ಮಸೀದಿಯಲ್ಲಿ ನಡೆಯಿತು. ವಿಧಿ ವಿಧಾನಗಳನ್ನು ಮಿತ್ತಬೈಲ್ ಮಸೀದಿಯಲ್ಲಿ ನೆರವೇರಿಸಿದ ಬಳಿಕ ಕೊಳತ್ತಮಜಲಿಗೆ ಸಾಗಿಸಲಾಯಿತು. ಸುಮಾರು 2 ಕಿ.ಮೀ. ಉದ್ದಕ್ಕೂ ಬಿ.ಸಿ.ರೋಡಿನಲ್ಲಿ ಜನರು ಸೇರಿದ್ದರು.
ರಹಿಮಾನ್ ಸಾವಿನ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೈಕಂಬ ಪರಿಸರದಲ್ಲಿ ಎಲ್ಲ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಯಿತು.
*15 ಮಂದಿ ವಿರುದ್ಧ ಪ್ರಕರಣ ದಾಖಲು:*
ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಹಿಮಾನ್ ಮತ್ತು ಕಂದರ್ ಶಾಫಿ ಹೊಳೆಬದಿಯಿಂದ ಪಿಕ್ಅಪ್ನಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ಮನೆಯೊಂದರ ಬಳಿ ಇಳಿಸುತ್ತಿದ್ದರು. ಈ ವೇಳೆ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಹೋದ ಕಲಂದರ್ ಶಾಫಿಗೂ ಚೂರಿಯಿಂದ ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು