ಇತ್ತೀಚಿನ ಸುದ್ದಿ
ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ
22/01/2022, 21:47
ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ – ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಈ ಕುರಿತು ಹೇಳಿಕೆ ನೀಡಿರುವ ಶಾಸಕ ಕಾಮತ್, ಕರ್ನಾಟಕ ಟೈಲರ್ ಅಸೋಸಿಯೇಷನ್ ನನಗೆ ಸಲ್ಲಿಸಿದ ಮನವಿಯನ್ವಯ ಮುಖ್ಯಮಂತ್ರಿಗಳಿಗೆ ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸುವಂತೆ ಮನವಿ ಸಲ್ಲಿಸಿದ್ದೇನೆ. ಭವಿಷ್ಯ ನಿಧಿ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಮತ್ತು ಆರೋಗ್ಯ ವಿಮೆ ಜಾರಿಗೊಳಿಸುವುದು, ಈ ವರೆಗೆ ಹಣ ಸಂದಾಯ ಮಾಡಿದ 57 ವರ್ಷ ತುಂಬಿದ ಎಲ್ಲಾ ಎನ್.ಪಿ.ಎಸ್ ಲೈಟ್ ಫಲಾನುಭವಿಗಳ ನಿವೃತ್ತಿ ವೇತನ ಘೋಷಿಸುವಂತೆ, ಹೊಲಿಗೆ ಕೆಲಸಗಾರರ ಹೆಣ್ಣು ಮಕ್ಕಳಿಗೆ ವಿವಾಹ ಧನ ಮತ್ತು ಹೆರಿಗೆ ಭತ್ಯೆ ನೀಡುವುದು, ಹೊಲಿಗೆ ಕೆಲಸಗಾರರ ಮಕ್ಕಳ ವಿಧ್ಯಾರ್ಥಿ ವೇತನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ ಎಂದರು.