7:49 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ ಭಗ್ನ

06/07/2026, 18:05

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿ ಆನೆ, ಕ್ಯಾಪ್ಟನ್ ಅಭಿಮನ್ಯು ದಂತ ಭಗ್ನಗೊಂಡಿರುವ ಘಟನೆ ನಡೆದಿದೆ.
ಸರಗೂರು ಭಾಗದಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ತೊಡಗಿರುವ ಅಭಿಮನ್ಯು, ಕ್ಯಾಂಪ್‌ನಲ್ಲಿ ಮರದ ದಿಮ್ಮಿ ಸಾಗಿಸುವ ವೇಳೆ ಕಠಿಣ ವಸ್ತುವಿಗೆ ದಂತ ಬಡಿದಿದೆ. ಪರಿಣಾಮ ಎಡಭಾಗದ ದಂತದ ತುದಿ ಮುರಿದಿದೆ. ಘಟನೆಯ ಬಳಿಕ ಪಶು ವೈದ್ಯರು ಅಭಿಮನ್ಯುವಿನ ದಂತ ಪರಿಶೀಲಿಸಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಸದ್ಯ ಮತ್ತಿಗೋಡು ಆನೆ ಶಿಬಿರದ ಅಭಿಮನ್ಯು ಆರೋಗ್ಯವಾಗಿದ್ದು, ಎಂದಿನಂತೆ ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ಒಟ್ಟಿನಲ್ಲಿ ಅಂಬಾರಿ ಆನೆ ಅಭಿಮನ್ಯುವಿನ ದಂತದ ತುದಿ ಮುರಿದಿದ್ದರೂ, ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದು ಸದ್ಯದ ಸಮಾಧಾನಕರ ವಿಷಯವಾಗಿದೆ.
ಈ ವರ್ಷ ಅಂಬಾರಿ ಹೊತ್ತರೆ, ʻಅಭಿಮನ್ಯು ಯುಗʼ ಅಂತ್ಯವಾಗುತ್ತದೆ ಎಂಬುದು ಗಮನಾರ್ಹ. ಮುಂದಿನ ವರ್ಷದಿಂದ ಅಂಬಾರಿ ಹೊರುವ ಜವಾಬ್ದಾರಿ ಮಹೇಂದ್ರ ಅಥವಾ ಧನಂಜಯನ ಹೆಗಲ ಮೇಲೆ ಬೀಳುವ ಸಾಧ್ಯತೆಯಿದೆ ಎನ್ನಲಾಗ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು