ಇತ್ತೀಚಿನ ಸುದ್ದಿ
ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ
12/02/2026, 18:58
ನವದೆಹಲಿ(reporterkarnataka.com): ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯಾದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿ ಮಾತುಕತೆ ನಡೆಸಿದರು.
ದೆಹಲಿಯ 10 ಜನಪಥ್ ನಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅಲ್ಲಿ ರಾಹುಲ್ ಗಾಂಧಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ್ ಗಾಂಧಿ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಶಿವಕುಮಾರ್, ಅಸ್ಸಾಂ ಸೇರಿ ಬೇರೆ ಬೇರೆ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷದ ವರಿಷ್ಠ ಜೊತೆ ಮಾತನಾಡಿದ್ದೇನೆ. ಯಾರ್ಯಾರ ಹತ್ತಿರ ಮಾತನಾಡಿದ್ದೇನೆ ಎಂದು ಹೇಳಬೇಕಿಲ್ಲ. ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ ಎಂದಿದ್ದಾರೆ.
ನಾನು ಬಂದಿರೋದೆ ರಾಜಕೀಯ ಮಾಡೋದಕ್ಕೆ. ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.













