8:09 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ತಿಂಡಿಯ ಆಮಿಷೆಯೊಡ್ಡಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಧರ್ಮದೇಟು

02/05/2022, 20:58

ಮೈಸೂರು(reporterkarnataka.com): ತಿಂಡಿ ಕೊಡಿಸುವ ಆಮಿಷವೊಡ್ಡಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಬಿಳಿಕರೆ ಹೋಬಳಿ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.

ಹೊಸಪುರ ಗ್ರಾಮದ ಕಾಳನಾಯಕ ಸಿಕ್ಕಿಬಿದ್ದವ.ಈತ ತಿಪ್ಪೂರಿನಲ್ಲಿ ಮಹಿಳೆಯೊಬ್ಬರೊಂದಿಗೆ ಅಕ್ರಮ ಸಂಬoಧ ಇರಿಸಿಕೊಂಡು ಸಿಕ್ಕಿಬಿದ್ದಿದ್ದ. ಪತ್ನಿ ನೀಡಿದ ದೂರಿನ ಹಿನ್ನಲೆ ಕಾಳನಾಯಕ ಎರಡು ವರ್ಷ ಜೈಲುವಾಸ ಅನುಭವಿಸಿ, ಬಿಡುಗಡೆಯಾಗಿ ಬಂದು ಒಂಟಿ ಜೀವನ ಸಾಗಿಸುತ್ತಿದ್ದ.ಆಟವಾಡುತ್ತಿದ್ದ ಬಾಲಕಿಯನ್ನ ತಿಂಡಿ ಕೊಡಿಸುವ ಆಸೆ ತೋರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿಯ ಚೀರಾಟ ಕೇಳಿ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಾಳನಾಯಕನನ್ನ ಕಂಬಕ್ಕೆ ಕಟ್ಟಿದ ಗ್ರಾಮದ ಮುಖಂಡರು, ಧರ್ಮದೇಟು ನೀಡಿದ ನಂತರ, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಿಳಿಕೆರೆ ಪೊಲೀಸರ ವಶಕ್ಕೆ ನೀಡಿದ್ದಾರೆ.ಆರೋಪಿಯನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು