5:25 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ತಿಂಗಳಾಂತ್ಯದೊಳಗೆ ರಾಜ್ಯ ಸ್ಕ್ರೀನಿಂಗ್ ಕಮಿಟಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕೇಂದ್ರಕ್ಕೆ ರವಾನೆ: ಮಾಜಿ ಸಿಎಂ ಮೊಯ್ಲಿ

05/03/2023, 18:13

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ ತಿಂಗಳಾಂತ್ಯದಲ್ಲಿ ಪಕ್ಷದ ರಾಜ್ಯ ಘಟಕ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿದ ನಂತರ ಪಟ್ಟಿ ಸಿದ್ಧಗೊಳ್ಳಲಿದೆ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸದಸ್ಯ ವೀರಪ್ಪ ಮೊಯ್ಲಿ ಹೇಳಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಪಕ್ಷದ ಚುನಾವಣೆಗೆ ಸ್ಪರ್ಧೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಪಕ್ಷ ಈ ಬಾರಿ ಅಧಿಕಾರಕ್ಕೆ ಬರಲಿದೆ. ಬಳಿಕ ಈ ಸರಕಾರದ ಅವಧಿಯ ಎಲ್ಲ ಹಗರಣಗಳನ್ನು ತನಿಖೆಗೆ ಒಳಪಡಿಸಲಾಗುವುದು ಎಂದರು.

ಕೇಂದ್ರ ಮತ್ತು ರಾಜ್ಯದ ಡಬಲ್ ಎಂಜಿನ್ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನರು ರಾಜ್ಯ ಸರ್ಕಾರ ಬಗ್ಗೆ ಬೇಸತ್ತು ಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಆಂತರಿಕ ವರದಿಗಳಲ್ಲಿ ಕೂಡ ಪಕ್ಷದ ಅಭ್ಯರ್ಥಿಗಳಿಗೆ ಗೆಲ್ಲುವ ಅವಕಾಶ ಸಾಕಷ್ಟು ಪ್ರತಿಕೂಲವಾಗಿದೆ ಎಂದರು.

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬರುವ ಮೊದಲು ಇಲ್ಲಿನ ಸ್ಥಿತಿ ತಿಳಿದು ಬರಲಿ. ಬಿಜೆಪಿ ಅಧಿಕಾರಿಕ್ಕೆ ಬಂದ ನಂತರ ಇವರು ಯಾವುದೇ ಮಾಧ್ಯಮ ಗೋಷ್ಠಿ ಆಹ್ವಾನ ಮಾಡಿಲ್ಲ. ಪತ್ರಕರ್ತರನ್ನು ಎದುರಿಸಲು ಇವರಿಂದ ಅಗುತ್ತಿಲ್ಲ. ಮಾಧ್ಯಮದ ಸ್ವಾತಂತ್ರ್ಯಹರಣ ಮಾಡುವಂತ ಹುನ್ನಾರ ನಡೆಯುತ್ತಿದೆ. ಬಿಬಿಸಿಯನ್ನು ಕೂಡ ಇವರು ಬಿಟ್ಟಿಲ್ಲ. ಇವರ ದಬ್ಬಾಳಿಕೆ ಮಾಧ್ಯಮದ ಮೇಲೆ ನಡೆಯುತ್ತಿದೆ ಎಂದು ಆರೋಪಿಸಿದರು.

ಕೃಷ್ಣಾ ನದಿ ನೀರಿನ ಬಗ್ಗೆ ಟ್ರಿಬ್ಯುನಲ್ ಆಗಿದ್ದರೂ, ಇನ್ನೂ ಕೂಡ ನೋಟಿಪಿಕೇಷನ್ ಹೊರಡಿಸಿಲ್ಲ. ಇದರ ವಿರುದ್ದ ದೊಡ್ಡ ಹೋರಾಟವನ್ನೇ ಮಾಡುತ್ತೇವೆ. ಇವರ ನಿರ್ಲಕ್ಷ್ಯದಿಂದ 6 ಲಕ್ಷ ಹೆಕ್ಟೇರ್ ನೀರಾವರಿಗೆ ನೀರುಣಿಸುವ ಭಾಗ್ಯ ತಪ್ಪಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗುತ್ತಿದೆ. 40 ಪರ್ಸೆಂಟ್ ಕಮಿಷನ್ ವ್ಯವಹಾರ ಅವ್ಯಾಹತವಾಗಿ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರ್ಸೆಂಟೆಜ್ ವ್ಯವಹಾರ ಇರಲಿಲ್ಲ. ಬಿಜೆಪಿ ಶಾಸಕರು ಬಂದ ನಂತರ ಇದು ಶುರುವಾಗಿದೆ. ಜನಪ್ರತಿನಿಧಿ ನ್ಯಾಯಾಲಯವು ಇಬ್ಬರು ಶಾಸಕರಿಗೆ ಶಿಕ್ಷೆ ಕೂಡ ನೀಡಿದ್ದು, ಹೈಕೋರ್ಟ್ ಕೂಡ ಇದನ್ನ ಎತ್ತಿ ಹಿಡಿದಿದೆ ಎಂದರು.

ಬಿಜೆಪಿ ಶಾಸಕ‌ ವಿರುಪಾಕ್ಷಪ್ಪ ಮಾಡ್ಯಾಳ್ ಅವರ ಭ್ರಷ್ಟಾಚಾರ ಬಿಜೆಪಿ ಸರ್ಕಾರದ ಕಮಿಷನ್ ವ್ಯವಹಾರಕ್ಕೆ ಸಾಕ್ಷಿ. ಮೋದಿ, ಅಮಿತ್ ಷಾ ಯಾರೊಬ್ಬರು ಇದರ ಬಗ್ಗೆ ಮಾತನಾಡದೇ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕ್ಯಾಂಪ್ಕೊ ಸಂಸ್ಥೆ ನಮ್ಮದೆ ಎಂಬ ಭಾವನೆ ಬಿಜೆಪಿಯದು. ಇದು ಬಹಳ ದಿನ ನಡೆಯಲ್ಲ. ದೇವಸ್ಥಾನದ ಅನುದಾನ ಬಿಡುಗಡೆಗೆ ಕಮಿಷನ್ ಕೇಳುವ ಸಂಸ್ಕೃತಿ ಬಿಜೆಪಿಯದ್ದು ಎಂದು ಟೀಕಿಸಿದರು.
ಪಕ್ಷದ ಮುಖಂಡರಾದ ಅಭಯಚಂದ್ರ ಜೈನ್, ಐವನ್ ಡಿಸೋಜ, ಶಶಿಧರ ಹೆಗ್ಡೆ, ನವೀನ್ ಡಿಸೋಜ, ವಿಶ್ವಾಸ್ ಕುಮಾರ್ ದಾಸ್ ಸೇರಿದಂತೆ ಹಲವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು