6:13 PM Sunday15 - November 2026
ಬ್ರೇಕಿಂಗ್ ನ್ಯೂಸ್
ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ…

ಇತ್ತೀಚಿನ ಸುದ್ದಿ

ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು ಸಾವು

15/11/2026, 18:13

ತುಮಕೂರು(reporterkarnataka.com): ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮಾದಿಹಳ್ಳಿ ಬಳಿ ನಡೆದಿದೆ. ಸಂಜು (23) ಹಾಗೂ ಹರ್ಷ (23) ಮೃತರು. ಇಬ್ಬರೂ ಸಂಬಂಧಿಕರ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬೈಕ್‌ನಲ್ಲಿ ವಾಪಸ್ ಬರುತ್ತಿದ್ದರು. ಈ ವೇಳೆ ತಿಪಟೂರು-ಅರಸೀಕೆರೆ ರಸ್ತೆಯ ಮಾದಿಹಳ್ಳಿ ಬಳಿ ಅಪಘಾತ ಸಂಭವಿಸಿದೆ.

*ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್‌ಗೆ ಡಿಕ್ಕಿ ಹೊಡೆದ ಬಸ್:*
ಅರಸೀಕೆರೆಯಿಂದ ತಿಪಟೂರಿನತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಮಾದಿಹಳ್ಳಿ ಬಳಿ ಬೈಕ್ ಸವಾರರು ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಸಂಜು ಗೆದ್ದಲೇಹಳ್ಳಿ ಗ್ರಾಮದ ದಿನೇಶ್ ಅವರ ಪುತ್ರ. ಮತ್ತೊಬ್ಬ ಮೃತ ಯುವಕ ಹರ್ಷ ಬೈರನಾಯಕನಹಳ್ಳಿ ಗ್ರಾಮದ ನಿವಾಸಿ ಆನಂದ್ ಕುಮಾರ್ ಅವರ ಪುತ್ರ. ಮದುವೆ ಕಾರ್ಯಕ್ರಮ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕರು ದುರಂತ ಅಂತ್ಯ ಕಂಡಿರುವುದರಿಂದ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು