5:15 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7 ಮಂದಿಗೆ ಗಾಯ

02/05/2026, 20:09

ಕೊಪ್ಪಳ(reporterkarnataka.com): ಧಾರವಾಡದಿಂದ ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಪ್ರಯಾಣಿಕರ ವಾಹನದ ಟೈರ್ ಬ್ಲಾಸ್ಟ್ ಆಗಿ ನಡುರಸ್ತೆಯಲ್ಲೇ ಪಲ್ಟಿಯಾಗಿದೆ. ಈ ದುರಂತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಏಳು ಜನ ಗಾಯಗೊಂಡಿದ್ದಾರೆ.
ಧಾರವಾಡದ 10 ಮಂದಿ ಭಕ್ತರ ಮನಸ್ಸಿನಲ್ಲಿ ಅಂಜನಾದ್ರಿಯ ಹನುಮನ ದರ್ಶನ ಪಡೆಯಬೇಕೆಂಬ ಅತೀವ ಹಂಬಲವಿತ್ತು. ಕ್ರೂಷರ್ ವಾಹನದಲ್ಲಿ ಹರಟೆ ಹೊಡೆಯುತ್ತಾ, ಸಂಭ್ರಮದಿಂದಲೇ ಅವರು ಅಂಜನಾದ್ರಿಯತ್ತ ಸಾಗುತ್ತಿದ್ದರು. ಆದರೆ, ವಿಧಿಯ ಆಟವೇ ಬೇರೆಯಾಗಿತ್ತು.
ಕೊಪ್ಪಳ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಷರ್ ವಾಹನ ಚಲಿಸುತ್ತಿತ್ತು. ಇನ್ನೇನು ಅಂಜನಾದ್ರಿ ತಲುಪಲು ಕೆಲವೇ ಮೈಲುಗಳ ದೂರ ಬಾಕಿ ಇತ್ತು. ಅಷ್ಟರಲ್ಲಿ ಇಡೀ ಹೆದ್ದಾರಿಯೇ ನಡುಗುವಂತಹ ಭೀಕರ ಶಬ್ದವೊಂದು ಕೇಳಿಬಂತು!
ಬೆಂಕಿಯಂತಹ ಬಿಸಿಲಿನಲ್ಲಿ ಚಲಿಸುತ್ತಿದ್ದ ಕ್ರೂಷರ್ ವಾಹನದ ಟೈರ್ ಏಕಾಏಕಿ ಸ್ಫೋಟಗೊಂಡಿತ್ತು. ಕ್ಷಣಾರ್ಧದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಹತ್ತೂ ಮಂದಿಯ ಕಿರುಚಾಟ, ಆಕ್ರಂದನ ನಡುವೆ ಏನಾಯ್ತು ಎಂದು ಯೋಚಿಸುವಷ್ಟರಲ್ಲಿ ದಿಕ್ಕಪಾಲಾಗಿ ಬಿದ್ದಿದ್ದ ಪ್ರಯಾಣಿಕರು.
ಈ ಭೀಕರ ಅಪಘಾತದಲ್ಲಿ ಓರ್ವ ದುರ್ದೈವಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪ್ರಯಾಣಿಕರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.


ಅದೃಷ್ಟವಶಾತ್ ಕ್ರೂಷರ್‌ನಲ್ಲಿದ್ದ ಉಳಿದ ಏಳು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಕೊಪ್ಪಳ ಗ್ರಾಮೀಣ ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಹನುಮನ ದರ್ಶನ ಪಡೆಯಬೇಕೆಂಬ ಭಕ್ತರ ಆಸೆ ಅರ್ಧ ದಾರಿಯಲ್ಲೇ ಕಮರಿ ಹೋಗಿದ್ದು, ಘಟನೆಯ ಮಾಹಿತಿ ತಿಳಿದು ಮೃತರ ಕುಟುಂಬದವರ ಗೋಳು ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು