ಇತ್ತೀಚಿನ ಸುದ್ದಿ
ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷರು – ಉಪಾಧ್ಯಕ್ಷರ ಭೇಟಿ
26/07/2025, 22:33

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೊಪ್ಪು ಗುಡ್ಡೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷರು – ಉಪಾಧ್ಯಕ್ಷರ ದಿಢೀರ್ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ವಿಚಾರವಾಗಿ ಪರಿಶೀಲನೆ ನಡೆಸಿದರು.
ಸೊಪ್ಪುಗುಡ್ಡೆಯಲ್ಲಿರುವ ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಸ್ವಚ್ಛತೆ ಹಾಗೂ ಮಕ್ಕಳಿಗೆ ಕುಡಿಯುವನೀರಿನ ವಿಷಯವಾಗಿ ಭೇಟಿ ನೀಡಿ ಕುಡಿಯುವ ನೀರು ಹಾಗೂ ಸ್ನಾನಕ್ಕೆ ಬಿಸಿ ನೀರು ಮೂರು ತಿಂಗಳುಗಳಿಂದ ಬರುತ್ತಿಲ್ಲ ಎಂಬುದಾಗಿ ತಿಳಿದು ಹಿರಿಯ ಹಾಸ್ಟೆಲ್ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಮಲೆನಾಡಿನ ತೀರ್ಥಹಳ್ಳಿ ಭಾಗದಲ್ಲಿ ಮಳೆ ಸಿಕ್ಕಾಪಟ್ಟೆ ಇರುವುದರಿಂದ ಮಕ್ಕಳಿಗೆ ತೊಂದರೆ ಆಗುತ್ತದೆ ಎಂಬ ವಿಷಯ ಪ್ರಸ್ತಾಪ ಮಾಡಿದರು.
ಮಳೆಗಾಲದ ಸಂದರ್ಭದಲ್ಲಿ ತಣ್ಣೀರು ಸ್ನಾನ ಮಾಡಲು ಆಗುವುದಿಲ್ಲ ಹಾಗೆ ಅದಕ್ಕೆ ಬೇಕಾಗುವ ವ್ಯವಸ್ಥೆ ಕೂಡಲೇ ಮಾಡಿಸಬೇಕು ಎಂದು ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಆದಷ್ಟು ಬೇಗ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ಸೌಲಭ್ಯ ಮಾಡಿಸಿಕೊಡಬೇಕು ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಹಮತ್ ಉಲ್ಲಾ ಆಸಾದಿ ತಿಳಿಸಿದರು.
ಈ ವೇಳೆ ಉಪಾಧ್ಯಕ್ಷರಾದ ಗೀತಾ ರಮೇಶ್, ಆರೋಗ್ಯ ಅಧಿಕಾರ ಜೆ ಪ್ರಕಾಶ್ ಹಾಗೂ ಇತರ ಸಿಬ್ಬಂದಿಗಳು ಇದ್ದರು.