5:22 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ತಿರುಗಿ ನೋಡದ ವಸತಿ ಸಚಿವರು: ಅರ್ಧಕ್ಕೆ ನಿಂತ ಆಶ್ರಯ ಮನೆ; ರಾಜ್ಯದಲ್ಲಿ ಬಡವರ ಗೋಳು ಕೇಳುವವರೇ ಇಲ್ಲ! 

13/06/2021, 18:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮೊದಲೇ ಕೋವಿಡ್ ಲಾಕ್ ಡೌನ್ ನಿಂದ ತತ್ತರಿಸಿ ಹೋಗಿರುವ ಬಡವರ ಗೋಳು ಕೇಳುವವರೇ ಇಲ್ಲ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವಿಸಿದೆ. ಬಡವರಿಗೆ ಸರಕಾರ ಕಟ್ಟಿ ಕೊಡುವ ಆಶ್ರಯ ಮನೆಗಳ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅದಲ್ಲದೆ ಇತ್ತೀಚಿನ ದಿನಗಳಲ್ಲಿ ಬಡವರಿಗಾಗಿ ಯಾವುದೇ ಆಶ್ರಯ, ಬಸವ ವಸತಿ ಯೋಜನೆ ಮನೆಗಳು ಬಿಡುಗಡೆಯಾಗುತ್ತಿಲ್ಲ. ಬಡವರನ್ನು ಕೇಳುವವರೇ ಇಲ್ಲದಂತಾಗಿದೆ.

ಮಸ್ಕಿ ಉಪ ಚುನಾವಣೆ ಸಂದರ್ಭದಲ್ಲಿ ವಸತಿ ಸಚಿವ ಸೋಮಣ್ಣ ಅವರು ಈಗಾಗಲೇ 600 ಮನೆಗಳು ಮಸ್ಕಿ ಕ್ಷೇತ್ರಕ್ಕೆ ಬಂದಿದೆ ಎಂದು ಹೇಳಿ ಮತದಾರರ  ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದರು. ಆದರೆ ಬಿಡುಗಡೆಯಾದ ಆಶ್ರಯ ಮನೆಗಳ ಕಾಮಗಾರಿಯೇ ಇನ್ನೂ ಪೂರ್ಣಗೊಂಡಿಲ್ಲ.

ಆಡಳಿತದ ಪಕ್ಷದ ಶಾಸಕರು, ಸಚಿವರುಗಳು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆಯೇ ಹೊರತು ಜನರ ಕಲ್ಯಾಣದ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಮಸ್ಕಿಯ ಜನತೆ ದೂರುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಬಗ್ಗೆ ಗಮನಹರಿಸಿ ನಿರ್ಗತಿಕರಿಗೆ, ಬಡವರಿಗೆ  ಹಾಗೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಜನತಾ ಮನೆಗಳ ನೀಡಬೇಕು. ಅದು ಬಿಟ್ಟು ಸರಕಾರದ ಖಜಾನೆಯಲ್ಲಿ ಹಣ ಇಲ್ಲ. ಕೋವಿಡ್ ಇದೆ ಎಂದು ವಿಷಯಾಂತರ ಮಾಡುತ್ತಿದೆ. ಹೀಗಾದರೆ ಬಡವರ ಬದುಕು ಹೇಗೆ ಸಾಗಿಸಬೇಕು ಎಂದು ಜನಸಾಮಾನ್ಯರು oಆಡಿಕೊಳ್ಳುತ್ತಿದ್ದಾರೆ.

ಸಂಬಂಧಪಟ್ಟ ಸಚಿವರು, ಮುಖ್ಯಮಂತ್ರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು