ಇತ್ತೀಚಿನ ಸುದ್ದಿ
ತಿರುಪತಿ: ವೈಕುಂಠ ಏಕಾದಶಿ ದರ್ಶನಕ್ಕೆ ನೂಕು ನುಗ್ಗಲು; ಮಹಿಳೆ ಸಹಿತ 6 ಮಂದಿ ದಾರುಣ ಸಾವು
10/01/2025, 09:56
ತಿರುಪತಿ(reporterkarnataka.com): ವೈಕುಂಠ ಏಕಾದಶಿ ದರ್ಶನದ ಅಂಗವಾಗಿ ವಿಶೇಷ ಟಿಕೆಟ್ ಪಡೆಯುವ ವೇಳೆ ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತಕ್ಕೊಳಗಾಗಿ 6 ಮಂದಿ ಭಕ್ತರು ಸಾವನ್ನಪ್ಪಿ, ಸುಮಾರು 25 ಮಂದಿ ಗಾಯಗೊಂಡ ಘಟನೆ ತಿರುಪತಿಯಲ್ಲಿ ನಡೆದಿದೆ.
ಟಿಕೆಟ್ ಪಡೆದುಕೊಳ್ಳುವ ಪೈಪೋಟಿಯಲ್ಲಿ ಏಕಕಾಲಕ್ಕೆ ಸಾವಿರಾರು ಮಂದಿ ಭಕ್ತರು ಕೌಂಟರ್ ಗೆ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ರಾತ್ರಿ ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ದರ್ಶನದ ಟಿಕೆಟ್ ಪಡೆಯುವ ಸಂದರ್ಭದ ನೂಕು ನುಗ್ಗಲು ಉಂಟಾಗಿದೆ. ಮೊದಲು ಒಬ್ಬ ಮಹಿಳೆ ಸಹಿತ 6 ಮಂದಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸುಮಾರು 25 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಎಲ್ಲರನ್ನೂ ಸ್ಥಳೀಯ ರುಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭೇಟಿ ನೀಡಿದ್ದಾರೆ.