7:10 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರುವರೆಗೆ ವಿಸ್ತರಣೆ

25/02/2024, 16:23

ಮಂಗಳೂರು(reporterkarnataka.com):ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ.
ಇಂದು ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರುನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರ 6 ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು