10:23 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕರಾವಳಿಯ ಜೀವ ನದಿ ನೇತ್ರಾಳ ಒಡಲಿಗೆ ಶೌಚಾಲಯದ ತ್ಯಾಜ್ಯ!: ಕ್ಯಾರೇ ಮಾಡ್ತಿಲ್ಲ ಸ್ಥಳೀಯಾಡಳಿತ!!

29/06/2026, 20:20

ವಿಶೇಷ ವರದಿ ಮಂಗಳೂರು

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ನೇತ್ರಾವತಿ ನದಿಯಲ್ಲಿ ಈ ಬಾರಿ ಮುಂಗಾರು ಮಳೆಯ ನೀರು ಹರಿಯದಿದ್ದರೂ ವಸತಿ ಸಮುಚ್ಚಯಗಳ ಶೌಚಾಲಯದ ತ್ಯಾಜ್ಯ ಸೇರಿದಂತೆ ಮಲಿನ ನೀರು ಹರಿಯುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
ಈ ಬಗ್ಗೆ ನದಿಯ ಒಡಲಿನಲ್ಲಿ ವಸತಿ ಸಮುಚ್ಚಯದಿಂದ ಹರಿದು ಬಂದು ಸಂಗ್ರಹವಾಗಿರುವ ಮಲಿನ ನೀರು ಹರಿಯುವ ನದಿಯನ್ನು ಸೇರುತ್ತಿರುವ ದೃಶ್ಯವನ್ನು ಸೆರೆ ಹಿಡಿದಿರುವ ಉಪ್ಪಿನಂಗಡಿ ನೆಲ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೈಲಾರ್ ರಾಜಗೋಪಾಲ ಭಟ್ ಜಿಲ್ಲೆಯ ಜೀವ ನದಿಯನ್ನು ಈ ಪ್ರಮಾಣದಲ್ಲಿ ಕೆಡಿಸುತ್ತಿರುವುದು ನಾಗರಿಕ ಸಮಾಜಕ್ಕೆ ಶೋಭೆ ಎನಿಸುವುದೇ ಎಂದು ಪ್ರಶ್ನಿಸಿದ್ದಾರೆ.

*ಶೌಚಾಲಯದ ತ್ಯಾಜ್ಯ ವಿಲೇವಾರಿ:*
ಈ ಬಗ್ಗೆ ವಸತಿ ಸಮುಚ್ಚಯದಲ್ಲಿನ ನಿವಾಸಿಯೊಬ್ಬಬ್ಬರು ಪ್ರತಿಕ್ರಿಯಿಸಿ, ಶೌಚಾಲಯದ ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿ ನಿರ್ವಹಿಸುವ ಅವಕಾಶವಿದ್ದರೂ, ಅದನ್ನು ಮಾಡದೆ ರಾತ್ರಿ ಹೊತ್ತು ನೇರವಾಗಿ ನದಿಗೆ ಬಿಡುವುದರಿಂದ ಪರಿಸರವಿಡೀ ದುರ್ನಾತ ಪಸಹರಿಸುತ್ತದೆ. ಮನೆಗೆ ಬಂದ ಅತಿಥಿಗಳು ದುರ್ನಾತ ಸಹಿಸಲಾಗದೆ ಮನೆಯಿಂದ ಹೊರಟ ಘಟನಾವಳಿಗಳು ನಡೆದು ಮುಜುಗರ ತರಿಸುತ್ತಿದೆ. ಆಡಳಿತ ವ್ಯವಸ್ಥೆ ಮೌನವಾಗಿದೆ ಎಂಬ ಅಳಲನ್ನು ತೋಡಿಕೊಂಡಿದ್ದಾರೆ.
ನದಿಗೆ ಶೌಚಾಲಯದ ತ್ಯಾಜ್ಯ ಬಿಡುತ್ತಿರುವ ಬಗ್ಗೆ, ರಾತ್ರಿ ಹೊತ್ತು ನದಿ ಪಾತ್ರದುದ್ದಕ್ಕೂ ಸಹಿಸಲಸಾಧ್ಯವಾದ ದುರ್ವಾಸನೆ ಪಸಹರಿಸುತ್ತಿರುವ ಬಗ್ಗೆ ಶಾಸಕರಲ್ಲಿ ಸಾರ್ವಜನಿಕರು ದೂರಿಕೊಂಡಾಗ, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಾದರೂ, ಅದ್ಯಾವುದೂ ಪಾಲನೆಯಾಗುತ್ತಿಲ್ಲ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು