ಇತ್ತೀಚಿನ ಸುದ್ದಿ
ಟೊಮ್ಯಾಟೋ ಜ್ವರ ಬಾಧೆ: ಕೇರಳದೆಲ್ಲೆಡೆ ಆತಂಕ; 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಂಕು
11/05/2022, 20:14
ತಿರುವನಂತಪುರ(reporterkarnataka.com):nಕೊರೊನಾ ಎಂಬ ಮಹಾಮಾರಿಯ ಆರ್ಭಟದ ಮಧ್ಯೆಯೇ ಕೇರಳದಲ್ಲಿ ಹೊಸ ಸೋಂಕುವೊಂದು ಜನರಲ್ಲಿ ಭೀತಿಯುಂಟು ಮಾಡಿದೆ.ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ ಈ ಜ್ವರ ಎಲ್ಲರ ಆತಂಕಕ್ಕೆ ಕಾರಣವಾಗಿದೆ.
ಕೇರಳದ ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರಿ 82 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಸೋಂಕು ತಗುಲಿದವರೆಲ್ಲ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದು, ವಾಸ್ತವ ಸ್ಥಿತಿಯ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಗಾ ವಹಿಸಿದೆ. ಟೊಮೇಟೊ ಜ್ವರ ಇದೊಂದು ಅಪರೂಪದ ವೈರಲ್ ಸೋಂಕು ಆಗಿದೆ. ಈ ಜ್ವರದಲ್ಲಿ ಬಳಲುತ್ತಿರುವ ಮಕ್ಕಳಲ್ಲಿ ಗುಳ್ಳೆ ಮತ್ತು ಚರ್ಮದ ಕಿರಿಕಿರಿ ಮತ್ತು ನಿರ್ಜಲೀಕರಣ ಕಂಡು ಬರುತ್ತಿದೆ. ಇದರಿಂದ ದೇಹದ ಹಲವು ಭಾಗಗಳಲ್ಲಿ ಗುಳ್ಳೆಗಳನ್ನು ಉಂಟಾಗುತ್ತಿವೆ. ಈ ಗುಳ್ಳೆಗಳು ಸಾಮಾನ್ಯವಾಗಿ ಕೆಂಪು ಬಣ್ಣದ ದುಂಡಗಿನ ಆಕಾರದಲ್ಲಿ ಇರುವುದರಿಂದ ಇದನ್ನು ಟೊಮೇಟೋ ಜ್ವರ ಎಂಬ ಹೆಸರಿನಲ್ಲಿ ಕರೆಯಲಾಗುತ್ತಿದೆ. ಕೊಲ್ಲಂ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಾತ್ರ ಈ ರೀತಿಯ ಜ್ವರದ ಪ್ರಕರಣಗಳು ವರದಿಯಾಗಿದ್ದು, ಇದು ಇತರ ಪ್ರದೇಶಗಳಿಗೂ ಹರಡಬಹುದು ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.