2:17 PM Wednesday30 - July 2025
ಬ್ರೇಕಿಂಗ್ ನ್ಯೂಸ್
USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ…

ಇತ್ತೀಚಿನ ಸುದ್ದಿ

ತೋಟ ಬೆಂಗ್ರೆ: ತೊಕ್ಕೊಟ್ಟು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಯುವ ವ್ಯಾಪಾರಿಯ ಶವ ಪತ್ತೆ

31/10/2023, 19:30

ಮಂಗಳೂರು/ಚಿಕ್ಕಮಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ವ್ಯಾಪಾರಿಯ ಮೃತದೇಹ ಪತ್ತೆಯಾಗಿದೆ.
ಚಿಕ್ಕಮಗಳೂರಿನ ಗೋಕುಲ್ ಫಾರ್ಮ್‌ ನಿವಾಸಿ ಪ್ರಸನ್ನ (37) ಅವರು ಸೋಮವಾರ ನೇತ್ರಾವತಿ ನದಿಗೆ ಹಾರಿದ್ದರು. ತಕ್ಷಣ ಅವರ ಶೋಧ ಕಾರ್ಯ ಆರಂಭವಾಗಿತ್ತು. ಮುಳುಗು ತಜ್ಞರು, ಈಜುಗಾರರ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ಇದೀಗ ಪ್ರಸನ್ನ ಅವರ ಮೃತದೇಹ ತೋಟಬೆಂಗ್ರೆ ಬಳಿ ಪತ್ತೆಯಾಗಿದೆ.
ಕಾಫಿಡೇ ಮಾಲೀಕ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ತೊಕ್ಕೊಟ್ಟು ನೇತ್ರಾವತಿ ಸೇತುವೆ ಸುದ್ದಿ ಮಾಡಿತ್ತು. ನಂತರ ಹಲವು ಮಂದಿ ಇಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೇತ್ರಾವತಿ ಸೇತುವೆ ಸೂಸೈಡ್ ಸ್ಪಾಟ್ ಆಗುವುದನ್ನು ತಪ್ಪಿಸಲು ಇಲ್ಲಿ ತಂತಿಬೇಲಿ ಹಾಕಿ ನೆಟ್ ಹಾಕಲಾಯಿತು.
ಪ್ರಸನ್ನ ಅವರು ಸೋಮವಾರ ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸೇತುವೆ ಬಳಿ ಕಾರು ನಿಲ್ಲಿಸಿ ಸೋಮವಾರ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಚಿಕ್ಕಮಗಳೂರು ಮೂಲದ ಪ್ರಸನ್ನಗೌಡ ಶವ ಕೊನೆಗೂ ಪತ್ತೆಯಾಗಿದೆ. ಅವರು ನದಿಗೆ ಹಾರಿದ ಸರಿಸುಮಾರು 24 ಗಂಟೆಗಳ ನಂತರ ಶವವನ್ನು ನದಿಯಿಂದ ಹೊರತೆಗೆಯಲಾಗಿದೆ.
ನಿನ್ನೆ ಮಧ್ಯಾಹ್ನದಿಂದ ಶವಕ್ಕಾಗಿ ಹುಡುಕಾಟ ನಡೆಸಲಾಗಿತ್ತು. ನಿನ್ನೆ ಸಂಜೆ ಅದೇ ಸ್ಥಳದಲ್ಲಿ ಒಂದು ಶವ ಸಿಕ್ಕಿತ್ತು ಅದನ್ನು ಪ್ರಸನ್ನ ಗೌಡ ಶವ ಎಂದೇ ಭಾವಿಸಲಾಗಿತ್ತು. ಆದರೆ ಕುಟುಂಬ ಸದಸ್ಯರು ಪರಿಶೀಲಿಸಿದ ನಂತರ ಅದು ಬೇರೆ ಯಾರದ್ದೋ ಶವ ಎಂದು ತಿಳಿದುಬಂದಿತ್ತು.
ನಿರಂತರ ಹುಡುಕಾಟದ ನಂತರ ಇಂದು ಮಧ್ಯಾಹ್ನದ ಹೊತ್ತಿಗೆ ಪ್ರಸನ್ನಗೌಡ ಅವರ ಶವ ಪತ್ತೆಯಾಗಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಸ್ಥಳೀಯ ಮೀನುಗಾರರು, ಮುಳುಗು ತಜ್ಞರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಹುಟ್ಟೂರು ಚಿಕ್ಕಮಗಳೂರು ಸಮೀಪದ ಬೈರಾಪುರ ಗ್ರಾಮಕ್ಕೆ ಮೃತದೇಹವನ್ನು ತರಲಾಗುತ್ತದೆ ಎಂದು ತಿಳಿದು ಬಂದಿದೆ.


ಪ್ರಸನ್ನ ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಭಾಗಕ್ಕೆ ತರಕಾರಿ ಸೊಪ್ಪು ಹೋಲ್ ಸೇಲ್ ವ್ಯಾಪಾರ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ವ್ಯಾಪಾರದ ಹಣ ವಸೂಲಿ ಮಾಡಿಕೊಂಡು ಬರುವುದಾಗಿ ಮನೆಯಲ್ಲಿ ಹೇಳಿ ಮಂಗಳೂರಿಗೆ ತೆರಳಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಯ ಸಮಯದಲ್ಲಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಕಾರಿನ ಪೋಟೋ ಹಾಗೂ ಡಿ.ಎಲ್. ವಿಳಾಸದ ಗುರುತಿನ ಮೇಲೆ ನದಿಗೆ ಹಾರಿದ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗಿತ್ತು.
ಪ್ರಸನ್ನ ಗೌಡ ವಿವಾಹಿತರಾಗಿದ್ದು ಪತ್ನಿ, ಇಬ್ಬರು ಚಿಕ್ಕ ಹೆಣ್ಣುಮಕ್ಕಳು, ತಂದೆ ತಾಯಿಯನ್ನು ಅಗಲಿದ್ದಾರೆ. ಪ್ರಸನ್ನ ಗೌಡರ ಸಾವಿನಿಂದ ಅವರ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.
2019 ರಲ್ಲಿ ಕಾಫಿ ಡೇ ಮಾಲೀಕರಾದ ವಿ.ಜಿ.ಸಿದ್ದಾರ್ಥ ಹೆಗ್ಡೆಯವರು ನದಿಗೆ ಹಾರಿದ್ದ ಸ್ಥಳದಲ್ಲಿಯೇ ಇವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಸನ್ನ ಅವರು ನದಿಗೆ ಹಾರಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು