4:54 PM Tuesday29 - September 2026
ಬ್ರೇಕಿಂಗ್ ನ್ಯೂಸ್
ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ

ಇತ್ತೀಚಿನ ಸುದ್ದಿ

ಕಾಲ್ನಡಿಗೆಯಲ್ಲೇ ಭಾರತ ಪರ್ಯಟನೆ: ಬರೋಬ್ಬರಿ 28 ರಾಜ್ಯ, 806 ಜಿಲ್ಲೆ ಪಾದಯಾತ್ರೆ ಹೊರಟ ಆಕಾಶ್ ಶುಕ್ಲಾ ಶೃಂಗೇರಿಗೆ ಆಗಮನ

29/09/2026, 16:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದೇಶದ 28 ರಾಜ್ಯಗಳು ಹಾಗೂ 806 ಜಿಲ್ಲೆಗಳನ್ನು ಕಾಲ್ನಡಿಗೆಯಲ್ಲೇ ಸುತ್ತುವ ಮಹತ್ವಾಕಾಂಕ್ಷೆಯ ಸಂಕಲ್ಪದೊಂದಿಗೆ ಆಕಾಶ್ ಶುಕ್ಲಾ ಎಂಬ ಯುವಕ ಸಂಪೂರ್ಣ ಭಾರತ ಪಾದಯಾತ್ರೆ ಕೈಗೊಂಡಿದ್ದಾರೆ. ಒಟ್ಟು 70,000 ಕಿಲೋಮೀಟರ್ ದೂರವನ್ನು ಕ್ರಮಿಸುವ ಗುರಿ ಹೊಂದಿರುವ ಇವರು, ಆರು ವರ್ಷಗಳ ಸುದೀರ್ಘ ಯೋಜನೆಯೊಂದಿಗೆ ಈ ಸಾಹಸಯಾತ್ರೆಯನ್ನು ಆರಂಭಿಸಿದ್ದಾರೆ.



ಈಗಾಗಲೇ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಪಾದಯಾತ್ರೆ ನಡೆಸುತ್ತಿರುವ ಆಕಾಶ್, ನಾಲ್ಕು ರಾಜ್ಯಗಳನ್ನು ಪೂರ್ಣಗೊಳಿಸಿ ಸುಮಾರು 8,000 ಕಿಲೋಮೀಟರ್ ದೂರವನ್ನು ಯಶಸ್ವಿಯಾಗಿ ಕ್ರಮಿಸಿದ್ದಾರೆ. ಪ್ರಸ್ತುತ ಕರ್ನಾಟಕವನ್ನು ತಲುಪಿರುವ ಅವರು ಶೃಂಗೇರಿ ಹಾಗೂ ಕುಂಚಿಕಲ್ ಜಲಪಾತದತ್ತ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್‌ ಕಡೆಗೆ ತಮ್ಮ ಪಯಣ ಮುಂದುವರಿಸಲಿದ್ದಾರೆ. ಇನ್ನೂ 62,000 ಕಿಲೋಮೀಟರ್‌ಗಳಷ್ಟು ಬೃಹತ್ ದೂರವನ್ನು ಕಾಲ್ನಡಿಗೆಯಲ್ಲೇ ಕ್ರಮಿಸುವ ಅಚಲ ಸಂಕಲ್ಪ ಅವರದ್ದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು