11:20 PM Thursday6 - March 2025
ಬ್ರೇಕಿಂಗ್ ನ್ಯೂಸ್
Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ… Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ… BJP v/s Cong | ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ದಕ್ಷಿಣ ಭಾರತದ… Womens Day | ಮಹಿಳಾಸ್ನೇಹಿ ಗ್ರಾಪಂ ಅಭಿಯಾನ, ಮಹಿಳಾ ಗ್ರಾಮಸಭೆ: ಮಾರ್ಚ್‌ 8… Protest | ಹಕ್ಕುಪತ್ರಕ್ಕಾಗಿ ಪಾದಯಾತ್ರೆ: ಗ್ರಾಮದ ನ್ಯಾಯಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಏಕಾಂಗಿ… Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ… Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ… Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ… Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್

06/03/2025, 23:20

ಬೆಂಗಳೂರು (reporterkarnataka.com) :ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ. ಪಾಟೀಲ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಕುಶಾಲಪ್ಪ ಎಂ.ಪಿ (ಸುಜಾ) ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2013-14ನೇ ಸಾಲಿನಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು 268.04 ಲಕ್ಷಗಳ ಅಂದಾಜು ವೆಚ್ಚದಲ್ಲಿ ಪ್ರಾರಂಭಿಸಲಾಯಿತು. ನಂತರ ಈ ಕಾಮಗಾರಿಯನ್ನು ರೂ 330.45 ಲಕ್ಷಗಳಲ್ಲಿ ಮುಗಿಸಲು ಆಡಳಿತಾತ್ಮಕ ಅನುಮೋದನೆಯನ್ನು ಮಡೆದುಕೊಂಡು 6 ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ಈ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ. ಸಿ.ಎಸ್.ಆರ್. ಅನುದಾನದಡಿಯಲ್ಲಿ ಕಾಮಗಾರಿಯನ್ನು ಮಾಡಲು ಕೊಡಗು ಜಿಲ್ಲಾಧಿಕಾರಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಕೋರಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಹಾಗೂ ಕೊಡಗು ಜಿಲ್ಲೆಯ ಮಡಕೇರಿಯ ಅಧ್ಯಕ್ಷರು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಅವರು ಕಾಮಗಾರಿಯನ್ನು ಸಿಎಸ್.ಆರ್. ಅನುದಾನದಲ್ಲಿ ಕೈಗೊಂಡು ನಿರ್ವಹಣೆ ಮಾಡಲು ಕಷ್ಟಸಾಧ್ಯ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದರಿ ಕಾಮಗಾರಿಯನ್ನು ಪಿ.ಪಿ.ಪಿ ಮಾದರಿಯಲ್ಲಿ ಪೂರ್ಣಗೊಳಿಸಿ ನಿರ್ವಹಣೆ ಹಾಗೂ ಕಾರ್ಯಚರಣೆ ಮಾಡುವ ಬಗ್ಗೆ ಮಾರ್ಗದರ್ಶನ ಕೋರಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು