ಇತ್ತೀಚಿನ ಸುದ್ದಿ
ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ ಗಾಯ
30/09/2025, 11:19

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ವೊಂದು ರಸ್ತೆ ಬದಿಗೆ ಮಗುಚಿ ಬಿದ್ದ ಘಟನೆ ನಡೆದಿದೆ,
ಘಟನೆಯಲ್ಲಿ ಬಸ್ ನಲ್ಲಿದ್ದ ಕೆಲವು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಜಲಾಶಯ ಬಳಿ ಕಾವೇರಿ ನೀರಾವರಿ ನಿಗಮದ ಯೋಜನೆಯಿಂದ ನಿರ್ಮಾಣವಾಗುತ್ತಿದ್ದ ರಸ್ತೆ ಕಾಮಗಾರಿ ಪೂರ್ಣಗೊಳ್ಳಿಸದೆ ಹಾಗೇ ಬಿಟ್ಟ ಪರಿಣಾಮ ರಸ್ತೆ ಪಕ್ಕದ ಹಳ್ಳಕ್ಕೆ ವಾಲಿ ಕೊಂಡಿದ್ದು ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗುವುದು ತಪ್ಪಿದೆ. ಅವೈಜ್ಞಾನಿಕ ಕಾಮಗಾರಿ ಯಿಂದ ಈ ಭಾಗದ ಗ್ರಾಮಸ್ಥರು ಕಾವೇರಿ ನೀರಾವರಿ ನಿಗಮದ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.