1:45 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

Tourist Safety | ಪ್ರವಾಸಿಗರ ಸುರಕ್ಷತೆಗೆ ಎಲ್ಲ ರೀತಿಯ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

18/03/2025, 00:15

ಬೆಂಗಳೂರು(reporterkarnataka.com):ಪ್ರವಾಸಿಗರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು.
ನಿಯಮ‌ 330ರಡಿ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ್ ಅವರು ಗಂಗಾವತಿಯ ಸಣಾಪೂರ ಕೆರೆ ಸಮೀಪ ನಡೆದ ವಿದೇಶಿ ಮಹಿಳೆ ಹಾಗೂ ರೆಸಾರ್ಟ್ ಒಡತಿಯ ಮೇಲಿನ ಅತ್ಯಾಚಾರ, ವಿದೇಶಿ ಪ್ರಜೆಗಳ ಮೇಲಿನ ಹಲ್ಲೆ ಪ್ರಕರಣ ಕುರಿತ ಪ್ರಸ್ತಾಪಕ್ಕೆ ಉತ್ತರಿಸಿದ ಗೃಹ ಸಚಿವರು, ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಕ್ರಿಮಿನಲ್ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದರು.
ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಆನೆಗುಂದಿ, ಸಣಾಪೂರ, ಬಸಾಪೂರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ರೆಸಾರ್ಟ್ ಹಾಗೂ ಹೋಮ್ ಸ್ಟೇ ಮಾಲೀಕರೊಂದಿಗೆ ಗಂಗಾವತಿ ಡಿಎಸ್ಪಿ ಕಚೇರಿಯಲ್ಲಿ ಸಭೆ ನಡೆಸಿದ್ದು, ಪ್ರವಾಸಿಗರ ಮಾಹಿತಿಯನ್ನು ಕಡ್ಡಾಯವಾಗಿ ದಾಖಲು ಮಾಡುವುದು, ಸೂಕ್ತ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸುವುದು ಸೇರಿದಂತೆ ವಿದೇಶಿ ಪ್ರವಾಸಿಗರ ಆಗಮನದ ಮಾಹಿತಿಯನ್ನು ಕಡ್ಡಾಯವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚಿಸಲಾಗಿದೆ. ಹೆಚ್ಚಿನ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯಿಂದ ಹೆಚ್ಚುವರಿಯಾಗಿ ಹೆದ್ದಾರಿ ಗಸ್ತು ವಾಹನ ನಿಯೋಜಿಸಿದ್ದು,
ಇನ್ಸ್ ಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನು ಮೇಲುಸ್ತುವಾರಿಗಾಗಿ ನೇಮಿಸಲಾಗಿದೆ ಎಂದವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು