ಇತ್ತೀಚಿನ ಸುದ್ದಿ
Train Service | ಮಂಗಳೂರು – ಸುಬ್ರಹ್ಮಣ್ಯ ನಡುವೆ ರೈಲು ಸಂಚಾರ ಏ.12 ರಿಂದ ಆರಂಭ: ದಿನಕ್ಕೆ 4 ಬಾರಿ ಯಾನ
11/04/2025, 17:10

ಜಯಾನಂದ ಪೆರಾಜೆ ಬಂಟ್ವಾಳ
info.reporterkarnataka@gmail.com
ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏಪ್ರಿಲ್ 12ರಿಂದ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಂದ ಮಂಗಳೂರು ಸೆಂಟ್ರಲ್ – ಸುಬ್ರಮಣ್ಯ ರೋಡ್ ಪ್ಯಾಸೆಂಜರ್ ರೈಲಿಗೆ ಶನಿವಾರ ಸಂಜೆ 4 ಗಂಟೆಗೆ ಬಾವುಟ ಪ್ರರ್ಶನದ ಮೂಲಕ ಉದ್ಘಾಟನೆಗೊಳ್ಳಲಿದ್ದು. ಸಂಜೆ 5 ಗಂಟೆಗೆ ನೆಟ್ಟಣ ರೈಲು ನಿಲ್ದಾಣಕ್ಕೆ ತಲುಪಲಿದೆ ಎಂದು ರೈಲು ಬಳಕೆದಾರರ ವೇದಿಕೆ ನೆಟ್ಟಣದ ಅಧ್ಯಕ್ಷ ಪ್ರಸಾದ್ ಕೆ. ಜೆ. ಪ್ರಕಟಿಸಿದ್ದಾರೆ.
ಈ ವಿಷಯವನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೂ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಘೋಷಿಸಿದ್ದು ಬಿ.ಸಿ.ರೋಡು ಪುತ್ತೂರು ರೈಲ್ವೇ ಪ್ರಯಾಣಿಕರಿಗೂ ಅನುಕೂಲವಾಗಲಿದೆ.
ರೈಲ್ವೇ ವೇಳಾ ಪಟ್ಟಿ
ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಇಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ-ಮಂಗಳೂರು (56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪಲಿದೆ.
ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.