ಇತ್ತೀಚಿನ ಸುದ್ದಿ
ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ದಾಂಜಲಿ
01/05/2025, 12:26

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ನಡೆಯಿತು.
ಅಗಲಿದ ಪೋಪ್ ಅವರ ಆತ್ಮಕ್ಕೆ ಶಾಂತಿ ಕೋರಿ ಬಲಿ ಪೂಜೆಯನ್ನು ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಅಲ್ಬನ್ ಡಿ’ಸೋಜಾ ಅವರು ಅರ್ಪಿಸಿದರು. ಬಳಿಕ ತಮ್ಮ ಪ್ರವಚನದಲ್ಲಿ ಪೋಪ್ ಅವರ ಜೀವನದ ಬಗ್ಗೆ ಮಾಹಿತಿ ನೀಡಿದರು. ಸಂತಾಪದ ಅಂಗವಾಗಿ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಾತನಾಡಿ, ಪೋಪ್ ಅವರು ಬಡ ಬಗ್ಗರ ಆಶಾ ಕಿರಣವಾಗಿದ್ದರು. ಚರ್ಚ್ ನಲ್ಲಿ ಬಹಳಷ್ಟು ಸುಧಾರಣೆಗಳನ್ನು ತಂದಿದ್ದಾರೆ. ಪರಿಸರ ಪ್ರೇಮಿಯಾಗಿದ್ದ ಅವರು ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಕಾಳಜಿ ವಹಿಸಿದ್ದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚರ್ಚ್ ನ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕ ಜೊಸ್ಲಿನ್ ಮೊಂತೇರೊ ಅವರು ಉಪಸ್ಥಿತರಿದ್ದರು.