7:56 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಂಗಳೂರಿನ‌ ಪಾಲ್ದನೆ ಚರ್ಚ್ ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರಿಗೆ ಶ್ರದ್ದಾಂಜಲಿ

01/05/2025, 12:26

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ನಡೆಯಿತು.
ಅಗಲಿದ ಪೋಪ್‌ ಅವರ ಆತ್ಮಕ್ಕೆ ಶಾಂತಿ ಕೋರಿ ಬಲಿ ಪೂಜೆಯನ್ನು ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಅಲ್ಬನ್‌ ಡಿ’ಸೋಜಾ ಅವರು ಅರ್ಪಿಸಿದರು. ಬಳಿಕ ತಮ್ಮ ಪ್ರವಚನದಲ್ಲಿ ಪೋಪ್ ಅವರ ಜೀವನದ ಬಗ್ಗೆ ಮಾಹಿತಿ ನೀಡಿದರು. ಸಂತಾಪದ ಅಂಗವಾಗಿ ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಮಾತನಾಡಿ, ಪೋಪ್ ಅವರು ಬಡ ಬಗ್ಗರ ಆಶಾ ಕಿರಣವಾಗಿದ್ದರು. ಚರ್ಚ್ ನಲ್ಲಿ ಬಹಳಷ್ಟು ಸುಧಾರಣೆಗಳನ್ನು ತಂದಿದ್ದಾರೆ. ಪರಿಸರ ಪ್ರೇಮಿಯಾಗಿದ್ದ ಅವರು ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಕಾಳಜಿ ವಹಿಸಿದ್ದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚರ್ಚ್ ನ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕ ಜೊಸ್ಲಿನ್‌ ಮೊಂತೇರೊ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು