8:05 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ತ್ರಿಪುರ: ಸಿಪಿಎಂ ಕಚೇರಿಗಳ ಮೇಲಿನ ದಾಳಿ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನಾ ಪ್ರದರ್ಶನ

12/09/2021, 22:32

ಮಂಗಳೂರು(reporterkarnataka.com): ತ್ರಿಪುರ ರಾಜ್ಯದೆಲ್ಲೆಡೆ ಸಿಪಿಎಂ ಕಚೇರಿಗಳ ಮೇಲೆ ನಡೆದ ಸರಣಿ ದಾಳಿಯನ್ನು ಖಂಡಿಸಿ ಸಿಪಿಎಂನಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಸೇರಿದ ಸಿಪಿಎಂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ ಅವರು ತ್ರಿಪುರ ರಾಜ್ಯದಲ್ಲಿ 40 ವರ್ಷಗಳ ಕಾಲ ಸುದೀರ್ಘವಾಗಿ ಆಳ್ವಿಕೆ ನಡೆಸಿದ ಕಮ್ಯುನಿಸ್ಟರು ರಾಜ್ಯದ ಸರ್ವಾಂಗೀಣ ಅಭಿವ್ರದ್ದಿ ಗೆ ಶಕ್ತಿ ಮೀರಿ ಶ್ರಮಿಸಿದ್ದರು. ಮಾತ್ರವಲ್ಲದೆ ಪ್ರತ್ಯೇಕ ರಾಜ್ಯದ ಬೇಡಿಕೆಯಿಟ್ಟ ಅಲ್ಲಿನ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ದ ಪ್ರಬಲವಾಗಿ ಸೆಣಸಾಟ ನಡೆಸಿ ರಾಜ್ಯದಲ್ಲಿ ಐಕ್ಯತೆ ಸಾಧಿಸಿ, ತ್ರಿಪುರವನ್ನು ಭಾರತದ ಅವಿಭಾಜ್ಯ ಅಂಗವಾಗಿಸುವಲ್ಲಿ ಅಲ್ಲಿನ ಕಮ್ಯುನಿಸ್ಟ್ ಚಳುವಳಿಯ ಪಾತ್ರ ಪ್ರಧಾನವಾಗಿದೆ. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಣಬಲ,ತೋಲ್ಬಲವನ್ನು ಬಳಸಿ, ಕುತಂತ್ರದಿಂದ ಆಧಿಕಾರಕ್ಕೇರಿದ ಬಿಜೆಪಿ, ತನ್ನ ಜನವಿರೋಧಿ ನೀತಿಗಳಿಂದಾಗಿ ಜನರ ಆಕ್ರೋಶಕ್ಕೆ ತುತ್ತಾಗಿದೆ. ಇದರ ವಿರುದ್ದ ಪ್ರಬಲ ಜನಚಳುವಳಿಯನ್ನು ಸಂಘಟಿಸಿದ ಕಮ್ಯುನಿಸ್ಟರ ವಿರುದ್ದ ಸರಣಿ ದಾಳಿ ಸಂಘಟಿಸುವ ಮೂಲಕ ತನ್ನ ಹತಾಶ ಪ್ರವ್ರತ್ತಿಯನ್ನು ಪ್ರದರ್ಶಿಸಿದೆ ಎಂದು ಟೀಕಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್,  ದೇಶಪ್ರೇಮದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ತ್ರಿಪುರದಲ್ಲಿ ದೇಶದ್ರೋಹಿಗಳೊಂದಿಗೆ ಒಪ್ಪಂದ ಮಾಡಿ ಕಳೆದ ಚುನಾವಣೆಯಲ್ಲಿ ಗೆದ್ದು ರಾಜ್ಯದೆಲ್ಲೆಡೆ ದೊಂಬಿ ಗಲಭೆ ಸೃಷ್ಟಿಸಿ ಜನರ ಬದುಕನ್ನೇ ನರಕಯಾತನೆಯನ್ನಾಗಿಸಿದೆ ಎಂದರು.

ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಯಾದವ ಶೆಟ್ಟಿ ಮಾತನಾಡಿ, ಕಮ್ಯುನಿಷ್ಟರು ತನ್ನ ಕೊನೆಯ ಉಸಿರು ಇರುವವರೆಗೂ ದೇಶದ ಐಕ್ಯತೆ, ಸೌಹಾರ್ದತೆಗಾಗಿ ಹಾಗೂ ಜನರ ಬದುಕಿನ ರಕ್ಷಣೆಗಾಗಿ ಶ್ರಮಿಸುತ್ತಾರೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಪಕ್ಷದ  ದ.ಕ.ಜಿಲ್ಲಾ ನಾಯಕರಾದ ಕೃಷ್ಣಪ್ಪ ಸಾಲ್ಯಾನ್, ದಯಾನಂದ ಶೆಟ್ಟಿ,ಜಯಂತಿ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಮಂಗಳೂರು ನಗರ ಮುಖಂಡರಾದ ನವೀನ್ ಕೊಂಚಾಡಿ, ಬಶೀರ್ ಪಂಜಿಮೊಗರು, ಬಾಬು ದೇವಾಡಿಗ,ಅಶೋಕ್ ಶ್ರೀಯಾನ್, ದಿನೇಶ್ ಶೆಟ್ಟಿ, ಶಶಿಧರ್ ಶಕ್ತಿಗರ, ಶ್ರೀನಾಥ ಕಾಟಿಪಳ್ಳ ಮಹಿಳಾ ಮುಖಂಡರಾದ ಭಾರತಿ ಬೋಳಾರ, ನಳಿನಾಕ್ಷಿ, ವಿಲಾಸಿನಿ, ಪ್ರಮೀಳಾ ಶಕ್ತಿನಗರ, ದಲಿತ ಹಕ್ಕುಗಳ ಸಮಿತಿಯ ನಾಯಕರಾದ ತಿಮ್ಮಯ್ಯ ಕೊಂಚಾಡಿ, ಪ್ರಗತಿಪರ ಚಿಂತಕರಾದ ಡಾ.ಕೃಷ್ಣಪ್ಪ ಕೊಂಚಾಡಿ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು