9:00 AM Sunday20 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ…

ಇತ್ತೀಚಿನ ಸುದ್ದಿ

ಟ್ರಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಪತ್ತೆ: ಪೊಲೀಸ್ – ಅರಣ್ಯ ಇಲಾಖೆ ಜಂಟೀ ಕಾರ್ಯಾಚರಣೆ ಯಶಸ್ವಿ

29/05/2023, 13:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಟ್ರಕ್ಕಿಂಗ್ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ ಹಚ್ಚಲಾಗಿದ್ದು, ಆ ಮೂಲಕ ಪ್ರಕರಣ ಸುಖಾಂತ್ಯಗೊಂಡಿದೆ. ಸ್ಥಳೀಯರು ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಶೋಧ ಕಾರ್ಯ ನಡೆಸಿತ್ತು.
ಭಾನುವಾರ ಸಂಜೆ ರಾಣಿ ಝರಿ ಪಾಲ್ಸ್ ಹೋಗಿ ಅಲ್ಲಿಂದ ಟ್ರಕ್ಕಿಂಗ್ ತೆರಳಿದ್ದ ಬೆಂಗಳೂರಿನ ಜೆ.ಪಿ. ನಗರದ ಪರೋಸ್ ಅಗರ್ ವಾಲ್ ನಾಪತ್ತೆಯಾಗಿದ್ದರು. ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆ, ಸ್ಥಳೀಯ ಸಹಾಯದಿಂದ ಶೋಧ ಕಾರ್ಯ ನಡೆಸಿತ್ತು. ಇದೀಗ ಬೆಳ್ತಂಗಡಿ ವ್ಯಾಪ್ತಿಯಲ್ಲಿರುವ ಚಾರ್ಮಾಡಿಯ ಘಾಟಿಯ ಅರಣ್ಯದಲ್ಲಿ ಪತ್ತೆ ಹಚ್ಚಲಾಗಿದೆ.


ಪತ್ತೆಯಾದ ಪರೋಸ್ ಅಗರ್ ವಾಲ್ ಅವರನ್ನು ಬಾಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು