8:53 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತುಳು ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಪ್ರಕಟ: ಕಾದಂಬರಿ ವಿಭಾಗದ ಪುರಸ್ಕಾರಕ್ಕೆ ರೂಪಕಲಾ ಆಳ್ವರ “ಪಮ್ಮಕ್ಕೆನ ಪೊರ್ಂಬಾಟ” ಕೃತಿ ಆಯ್ಕೆ

09/09/2026, 20:04

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2024 ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನವನ್ನು ಪ್ರಕಟಿಸಲಾಗಿದೆ.


2024ರ ಸಾಲಿನ ಕವಿತೆ ವಿಭಾಗದ ಪುರಸ್ಕಾರಕ್ಕೆ ಯಶೋದ ಮೋಹನ್ ಅವರ “ತಡ್ಯ ಕಡಪುನಗ” ಕೃತಿ ಆಯ್ಕೆಯಾಗಿದೆ. 2024 ನೇ ಸಾಲಿನ ನಾಟಕ ಪುಸ್ತಕ ವಿಭಾಗದ ಪುರಸ್ಕಾರಕ್ಕೆ ಅಕ್ಷತಾ ರಾಜ್ ಪೆರ್ಲ ಅವರ ‘ಮಂದಾರ ಮಲಕ” ಕೃತಿ ಆಯ್ಕೆಯಾಗಿದೆ.
2025ನೇ ಸಾಲಿನ ಕಾದಂಬರಿ ವಿಭಾಗದ ಪುರಸ್ಕಾರಕ್ಕೆ ರೂಪಕಲಾ ಆಳ್ವ ಅವರ “ಪಮ್ಮಕ್ಕೆನ ಪೊರ್ಂಬಾಟ” ಕೃತಿ ಆಯ್ಕೆಯಾಗಿದೆ. 2025ನೇ ಸಾಲಿನ ಕವಿತೆ ವಿಭಾಗದ ಪುರಸ್ಕಾರಕ್ಕೆ ಅಶೋಕ ಎನ್ ಕಡೇಶಿವಾಲಯ ಅವರ “ಬದ್ಕ್ ಬಾಗ್ಯೊದ ಬೊಲ್ಪು” ಕೃತಿ ಆಯ್ಕೆಯಾಗಿದೆ. ಈ ಪುರಸ್ಕಾರ ತಲಾ ಇಪ್ಪತ್ತೈದು ಸಾವಿರ ರೂಪಾಯಿಗಳ ಬಹುಮಾನ ಮೊತ್ತ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಅಕ್ಟೋಬರ್ 04 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು