4:17 AM Wednesday18 - February 2026
ಬ್ರೇಕಿಂಗ್ ನ್ಯೂಸ್
ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ

ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆ ಕೈ ಬಿಡಲು ತುಳು ಸಾಹಿತ್ಯ ಅಕಾಡೆಮಿ ಆಗ್ರಹ

23/02/2025, 23:18

ಮಂಗಳೂರು(reporterkarnataka.com): ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ದೇಶದ ವಿಭಿನ್ನ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅಭಿರುಚಿ ಮೂಡಿಸುವ ಸಲುವಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮವು ಒಂದು ಉತ್ತಮ ಪರಿಕಲ್ಪನೆಯಾಗಿದೆ. ರಂಗೋತ್ಸವದ ಸಲುವಾಗಿ ಯಾವೆಲ್ಲ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಿದೆ ಎಂಬ ಬಗ್ಗೆ ಉದಾಹರಣೆಗಾಗಿ ನೀಡಲಾಗಿರುವ ಪಟ್ಟಿಯಲ್ಲಿ ಭೂತಾರಾಧನೆಯನ್ನು ಉಲ್ಲೇಖ ಮಾಡಿರುವುದು ಇಲಾಖೆಯ ಸರಿಯಾದ ನಡೆಯಾಗಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುತ್ತೋಲೆಯಿಂದ ಭೂತಾರಾಧನೆಯ ಹೆಸರನ್ನು ಕೈ ಬಿಟ್ಟು ಪ್ರತ್ಯೇಕ ಸುತ್ತೋಲೆಯನ್ನು ಪ್ರಕಟಿಸಬೇಕೆಂದು ಆಗ್ರಹಿಸಿದ್ದಾರೆ. ಭೂತಾರಾಧನೆಯು ಕರಾವಳಿಯ ಅತ್ಯುನ್ನತ ಸಾಂಸ್ಕೃತಿಕ ಹಾಗೂ ಆರಾಧನಾ ಪರಂಪರೆಯಾಗಿರುತ್ತದೆ. ಆದರೆ ಭೂತಾರಾಧನೆಯನ್ನು ಸಾಂಸ್ಕೃತಿಕ ಸ್ಪರ್ಧೆಯ ಭಾಗವಾಗಿ ಪರಿಗಣಿಸುವುದು ಸೂಕ್ತವಲ್ಲ. ಆರಾಧನ ಪ್ರಕಾರ ಒಂದನ್ನು ಶಾಲೆಗಳ ಸ್ಪರ್ಧಾ ವೇದಿಕೆಗೆ ತಂದಾಗ ಜನರ ನಂಬಿಕೆಗೆ ಘಾಸಿಯಾಗುವುದು ಸಹಜ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇಲಾಖೆಯು ತಕ್ಷಣ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ನು ಪುನರ್ ಪರಿಶೀಲನೆ ಮಾಡಿ ಉದಾಹರಣೆಗಾಗಿ ನೀಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿರುವ ಭೂತಾರಾಧನೆಯ ಹೆಸರನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು