ಇತ್ತೀಚಿನ ಸುದ್ದಿ
ತುಳುನಾಡಿನ ದೈವಾರಾಧನೆಯ ನಿಂದನೆ, ಮಹಿಳೆಯರ ಬಗ್ಗೆ ಅಶ್ಲೀಲ ಪೋಸ್ಟ್: ಆರೋಪಿ ಬೆಂಗಳೂರು ನಿವಾಸಿಯ ಬಂಧನ
08/07/2023, 22:36
ಮಂಗಳೂರು(reporterkarnataka.com): ತುಳುನಾಡಿನ ದೈವಾರಾಧನೆ ನಿಂಧನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಟ್ವಿಟರ್ ನಲ್ಲಿ ನಕಲಿ ಖಾತೆಯ ಮೂಲಕ ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ (ರಿ) ನೀಡಿದ ದೂರಿನಂತೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತುಮ ಪ್ರಕರಣ ಆರೋಪಿಯಾದ ಬೆಂಗಳೂರಿನ ಜಕ್ಕೂರ್ ಅಮೃತಹಳ್ಳಿ ನಿವಾಸಿ ಶಿವರಾಜ್ ಎಚ್.ಕೆ.(37 ) ಎಂಬಾತನನ್ನು ದಸ್ತಗಿರಿ ಮಾಡಿ ಮಂಗಳೂರಿನ
7ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರು ಕುಲದೀಪ್ ಕುಮಾರ್ ಆರ್ ಜೈನ್ ಅವರ ಮಾರ್ಗದರ್ಶನದಂತೆ, ಸಿಸಿಬಿ ಘಟಕದ ಎಸಿಪಿಯವರಾದ ಪಿ. ಎ. ಹೆಗ್ಡೆ ಅವರ ನೇತೃತ್ವದಲ್ಲಿ, ಮಂಗಳೂರು ನಗರ ಸನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸತೀಶ್ ಎಂ.ಪಿ. ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿದ್ದರು.