8:17 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

24/04/2026, 10:42

ತುಮಕೂರು(reporterkarnataka.com): ತುಮಕೂರು ತಾಲ್ಲೂಕಿನ ವಿವಿಧೆಡೆ ಒಂದು ವಾರದ ಅಂತರದಲ್ಲಿ 32 ನವಿಲು ಮೃತಪಟ್ಟಿವೆ. ಬಿಸಿಲಿನ ತಾಪ ತಾಳಲಾರದೆ ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಸಂಶಯಪಟ್ಟಿದೆ.
ಮೃತ ನವಿಲುಗಳ ಅಂಗಾಂಗ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಅರಣ್ಯ ಇಲಾಖೆ ಹೇಳಿದೆ. ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಬೊಮ್ಮನಹಳ್ಳಿ, ಕೋಳಿಹಳ್ಳಿ ಹಾಗೂ ಗೂಳೂರು ಹೋಬಳಿ ಬೈರಸಂದ್ರ, ಹುಲ್ಲೇನಹಳ್ಳಿ ಗ್ರಾಮದ ಸುತ್ತಮುತ್ತ ಏ.16ರಂದು 11 ನವಿಲು, ಏ.20ರಂದು 11 ನವಿಲು ಮೃತಪಟ್ಟಿವೆ. ಬೊಮ್ಮನಹಳ್ಳಿ, ಟಿ.ಜಿ.ಪಾಳ್ಯದಲ್ಲಿ ಏ. 21ರಂದು 10 ನವಿಲು ಮೃತಪಟ್ಟಿವೆ.
ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಆರ್.ಶಶಿಧರ್ ತಿಳಿಸಿದ್ದಾರೆ.
ನಿರ್ದಿಷ್ಟವಾಗಿ ಯಾವುದೋ ಒಂದು ಗ್ರಾಮ ಅಥವಾ ಒಂದೇ ಕಡೆ ನವಿಲುಗಳು ಮೃತಪಟ್ಟಿಲ್ಲ. ಬೇರೆ ಬೇರೆ ಸ್ಥಳಗಳಲ್ಲಿ ಸಾವನ್ನಪ್ಪುತ್ತಿವೆ. ಮರಣೋತ್ತರ ಪರೀಕ್ಷೆ ಸಮಯದಲ್ಲಿ ಮೃತ ದೇಹದಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡು ಬಂದಿಲ್ಲ. ಬಿಸಿಲಿನ ತಾಪ ತಾಳಲಾರದೆ ಸತ್ತಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು