3:48 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್ ಪುಡಿಪುಡಿ; ಇಬ್ಬರ ಬಂಧನ

26/03/2026, 15:00

ತುಮಕೂರು(reporterkarnataka.com):ತುಮಕೂರು ಪಟ್ಟಣದ ವಿವಿಧ ಬಡಾವಣೆಗಳಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ವಾಹನಗಳ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ ಗ್ಲಾಸ್‌ಗಳನ್ನು ಪುಡಿಪುಡಿ ಮಾಡಿರುವ ಘಟನೆ ನಡೆದಿದೆ.
ಕುಡಿದ ಮತ್ತಿನಲ್ಲಿದ್ದ ಐವರು ಪುಂಡರ ತಂಡ ಈ ಕೃತ್ಯ ಎಸಗಿದ್ದು, ಪಟ್ಟಣದ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಬುಧವಾರ ಮಧ್ಯರಾತ್ರಿ ಸುಮಾರು 2 ಗಂಟೆಯ ವೇಳೆಗೆ ಕೊರಟಗೆರೆ ಪಟ್ಟಣದ ವಿವಿಧ ಬೀದಿಗಳಲ್ಲಿ ಸಂಚರಿಸಿದ ಈ ಪುಂಡರ ಗುಂಪು, ಸಾಲು ಸಾಲಾಗಿ ನಿಲ್ಲಿಸಿದ್ದ ವಾಹನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ.
ಸುಮಾರು 10ಕ್ಕೂ ಹೆಚ್ಚು ಕಾರುಗಳು ಹಾಗೂ 5ಕ್ಕೂ ಹೆಚ್ಚು ಬೈಕ್‌ಗಳ ಗಾಜುಗಳನ್ನು ಕಲ್ಲು ಹಾಗೂ ಮಾರಕಾಸ್ತ್ರಗಳಿಂದ ಹೊಡೆದು ಹಾಕಿದ್ದಾರೆ. ಮನೆಯ ಮುಂದೆ ವಾಹನ ನಿಲ್ಲಿಸಿದ್ದ ಮಾಲೀಕರು ಬೆಳಗ್ಗೆ ಎದ್ದು ನೋಡಿದಾಗ ವಾಹನಗಳು ಜಖಂಗೊಂಡಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ.
ಘಟನೆಯ ಬಳಿಕ ಸಾರ್ವಜನಿಕರು ನೀಡಿದ ದೂರಿನ ಆಧಾರದ ಮೇರೆಗೆ ತಕ್ಷಣವೇ ಕಾರ್ಯಪ್ರವೃತ್ತರಾದ ಕೊರಟಗೆರೆ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯರ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಐವರು ಪುಂಡರ ಪೈಕಿ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.
ಪಟ್ಟಣದ ಮುಖ್ಯ ರಸ್ತೆ ಹಾಗೂ ಗಲ್ಲಿಗಳಲ್ಲಿ ಈ ರೀತಿ ಸರಣಿ ವಾಹನ ಜಖಂ ಪ್ರಕರಣ ನಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಧ್ಯರಾತ್ರಿಯಲ್ಲಿ ಸಂಚರಿಸುವ ಪುಂಡರ ಹಾವಳಿ ಹೆಚ್ಚಾಗುತ್ತಿದೆ, ಪೊಲೀಸರು ರಾತ್ರಿ ಗಸ್ತನ್ನು ಮತ್ತಷ್ಟು ಬಿಗಿಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸದ್ಯ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು