1:27 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ: 15 ಮಂದಿ ಸಿಲುಕಿರುವ ಶಂಕೆ, 10 ಜನರ ರಕ್ಷಣೆ

13/08/2026, 22:14

ಚಮೋಲಿ(reporterkarnataka.com): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ‘ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್’ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗದ ಒಂದು ಭಾಗ ಗುರುವಾರ ದಿಢೀರ್ ಕುಸಿದು ಬಿದ್ದಿದೆ. ಪರಿಣಾಮವಾಗಿ ಸುರಂಗದೊಳಗೆ ಕೆಲಸ ಮಾಡುತ್ತಿದ್ದ ಹಲವು ಕಾರ್ಮಿಕರು ಒಳಗಡೆಯೇ ಸಿಲುಕಿಕೊಂಡಿದ್ದಾರೆ.
ಸುರಂಗ ಕುಸಿದ ತಕ್ಷಣ ಅಪಾರ ಪ್ರಮಾಣದ ಮಣ್ಣಿನ ಶೇಖರಣೆ (ಮಣ್ಣಿನ ಕುಸಿತ) ಹಾಗೂ ನೀರು ಒಳನುಗ್ಗಿದ್ದು, ಸ್ಥಳಕ್ಕೆ ಧಾವಿಸಿರುವ ರಕ್ಷಣಾ ಪಡೆಗಳು ಬೃಹತ್ ಮಟ್ಟದ ಕಾರ್ಯಾಚರಣೆ ಆರಂಭಿಸಿವೆ.

*20ರಿಂದ 25 ಕಾರ್ಮಿಕರು ಸಿಲುಕಿದ್ದ ಶಂಕೆ, 10 ಜನರ ಸುಗಮ ರಕ್ಷಣೆ:*
ಪಿಪಲ್ಕೋಟಿಯಲ್ಲಿರುವ THDC ಯೋಜನೆಯ ಸುರಂಗದಲ್ಲಿ ಅವಘಡ ಸಂಭವಿಸಿದಾಗ ಅಂದಾಜು 20 ರಿಂದ 25 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ತಕ್ಷಣವೇ ಕಾರ್ಯಾಚರಣೆಗೆ ಇಳಿದ ತುರ್ತು ರಕ್ಷಣಾ ಸಿಬ್ಬಂದಿ ಇದುವರೆಗೆ 10 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದ ಕಾರ್ಮಿಕರನ್ನು ಹೊರತರಲು ಶ್ರಮಿಸಲಾಗುತ್ತಿದ್ದು, ಪ್ರಸ್ತುತ ಒಳಗೆ ಸಿಲುಕಿರುವ ಒಟ್ಟು ಸಿಬ್ಬಂದಿಯ ನಿಖರ ಸಂಖ್ಯೆಯನ್ನು ಅಧಿಕಾರಿಗಳು ಅಧಿಕೃತವಾಗಿ ದೃಢಪಡಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು